ಜೆ.ಪಿ. ನಗರದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ವೈಭವದ ಗುರುಪೂರ್ಣಿಮೆ ಸಿದ್ದತೆ: ಹೂವುಗಳು ಹಾಗೂ ಹಣ್ಣುಗಳಿಂದ ವೈಭವದ ಸಿಂಗಾರ

ಬೆಂಗಳೂರು, ಜುಲೈ 20: ವಿಶೇಷ ಅಲಂಕಾರಕ್ಕೆ ಹಾಗೂ ಪೂಜೆಗೆ ಪ್ರಸಿದ್ದಿಯಾಗಿರುವ ಜೆ.ಪಿ. ನಗರದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ  ವಿಶೇಷವಾಗಿ ಗುರುಪೂರ್ಣಿಮೆ ಆಚರಿಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ವಿಶೇಷ ಪೂಜೆಯನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷರಾದ ಲೋಕರಾಜು ತಿಳಿಸಿದ್ದಾರೆ.

 

ಪ್ರತಿವರ್ಷದಂತೆ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ಅದ್ದೂರಿಯಾಗಿ ಗುರು ಪೂರ್ಣಿಮೆ ಆಚರಿಸುತ್ತಿದ್ದು, ಈ ಬಾರಿ ಮತ್ತಷ್ಟು ಸಂಭ್ರಮ ಮತ್ತು ವಿಶೇಷತೆಗಳೊಂದಿಗೆ ಸಾಯಿ ಬಾಬಾರ ಸ್ಮರಣೆಗೆ ವ್ಯವಸ್ಥೆ ಮಾಡಲಾಗಿದೆ. ಬಾಬಾರ ‘’ಸಬ್ ಕಾ ಮಾಲೀಕ್ ಏಕ್ ಹೇ’’ ಎಂಬ ಪರಿಕಲ್ಪನೆಯಡಿ ಬಡವ, ಬಲ್ಲಿದ ಬೇಧ-ಭಾವವಿಲ್ಲದೇ ಎಲ್ಲಾ ಸಮುದಾಯದವರಿಗೆ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ ವಿವಿಧ ಹಣ್ಣುಗಳು, ವಿಶೇಷ ಹೂವುಗಳಿಂದ ದೇವಸ್ಥಾನವನ್ನು ಆಲಂಕರಿಸಲಾಗಿದೆ ಎಂದು ತಿಳಿಸಿದರು. 

 

ಅಭಿಷೇಕ, ಆಲಂಕಾರ, ಸಾಯಿ ಮಂತ್ರ ಹೋಮ, ಸುದರ್ಶನ ಹೋಮ, ದತ್ತಾತ್ರೇಯ ಹೋಮ ಸೇರಿದಂತೆ ಇನ್ನಿತರ ಪೂಜೆಗಳನ್ನು ಆಯೋಜಿಸಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಸಾದವನ್ನು ಪಡೆಯುವಂತೆ ಟ್ರಸ್ಟಿಗಳಾದ ಧನರಾಜು, ಆನಂದರಾಜು ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ