ತಿಮ್ಮಾಪುರ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ರಮೇಶ್ ಕೊಳ್ಳಾರ
ಬಾಗಲಕೋಟ : ತಾಲೂಕಿನ ತಿಮ್ಮಾಪುರ ಗ್ರಾಮ ಪಂಚಾಯಿತಿಯಲ್ಲಿ ಈಗಾಗಲೇ ಅಧ್ಯಕ್ಷರಾಗಿ 12ತಿಂಗಳು ಅವಧಿಯನ್ನು ಪೂರ್ಣಗೊಳಿಸಿದ ಸಂಗನಗೌಡ ರಾಮನಗೌಡ ಪಾಟೀಲ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ ಹಿನ್ನೆಲೆ ತಿಮ್ಮಾಪುರ ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ಅಧಿಕಾರಿಯದ ಹೇಮಾವತಿ ಸೂಲ್ಪಿ ಸಾಮಾನ್ಯ ಸಭೆ ಕರೆದು ನಾಮಪತ್ರ ಪರಿಶೀಲನೆ ಮಾಡಲಾಯಿತು. ತಿಮ್ಮಾಪುರ್ ಗ್ರಾಮ ಪಂಚಾಯಿತಿಯ 11 ಸದಸ್ಯರು ಸಭೆಗೆ ಹಾಜರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಇದ್ದುದರಿಂದ ಕಾಂಗ್ರೆಸ್ ಬೆಂಬಲಿತ ಸದ್ಯಸರಾದ ರಮೇಶ್ ಕೊಳ್ಳಾರ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಕಾಂಗ್ರೆಸ್ಸಿನ ಯುವ ಮುಖಂಡರಾದ ಉಮೇಶ್ ಮೇಟಿ , ಬಾಗಲಕೋಟೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸವಂತಪ್ಪ ಮೇಟಿ, ಹನುಮಂತ ಪೂಜಾರಿ, ಶ್ರೀಕರ್ ದೇಸಾಯಿ, ಇವರಿಗೆ ಹಾರ ತುರಾಯಿಗಳನ್ನು ಹಾಕಿ ಸಿಹಿ ಹಂಚಿ ಪಟಾಕಿ ಸಿಡಿಸಿ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ರಮೇಶ್ ಕೊಳ್ಳಾರ ಅವರನ್ನು ಸನ್ಮಾನಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಮೇಶ್ ಕೊಳ್ಳಾರ ಗ್ರಾಮಗಳಿಗೆ ಕುಡಿಯುವ ನೀರಿನ ಪ್ರಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ನೀಡುವ ಮೂಲಕ ಅಭಿವೃದ್ಧಿ ಪಡಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅರ್ಚನಾ ಕುಲಕರ್ಣಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು
ಅಡಿವೆಪ್ಪ ಸರೂರ
ಸಂಪಾದಕರು ಉದಯ ಲೋಕ
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ