ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಸಚಿವ ತಿಮ್ಮಾಪೂರ ಕರೆ

ಬಾಗಲಕೋಟೆ:  ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮತದಾನ ಮೌಲ್ಯದ ಮಹತ್ವವನ್ನು ಮನೆ ಮನೆಗೆ ತೆರಳಿ ಪ್ರತಿಯೊಂದು ಹಂತದಲ್ಲಿ ತಿಳಿಸುವ ಕಾರ್ಯವಾಗಬೇಕೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕರೆ ನೀಡಿದರು. 
             ಜಿಲ್ಲಾಡಳಿತ ಭವನದ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಭಾರತ ಇಂದು ಪ್ರಜಾಪ್ರಭುತ್ವದ ಅತೀ ದೊಡ್ಡ ದೇಶವಾಗಿದೆ ಎಂದರು.
            ರಾಜ ಮಹಾರಾಜರ ಕಾಲದಲ್ಲಿ ರಾಜ ಮನೆತನದವರೇ ರಾಜ ನಾಗಬೇಕಿತ್ತು. ಆದರೆ ಈ ಪ್ರಜಾಪ್ರಭತ್ವ ವ್ಯವಸ್ಥೆಯಲ್ಲಿ ಓರ್ವ ಸಾಮಾನ್ಯ ವ್ಯಕ್ತಿಯು ಸಹ ಈ ದೇಶದ ಪ್ರಧಾನ ಮಂತ್ರಿ, ರಾಜ್ಯದ ಮುಖ್ಯಮಂತ್ರಿಯಾಗಬಹುದು. ಅಂತಹ ಅದ್ಬುತವಾದ ಶಕ್ತಿ ನಮ್ಮ ಪ್ರಜಾಪ್ರಭುತ್ವಕ್ಕಿದೆ. ಭಾರತದ ಸಂವಿಧಾನ ವಿಶ್ವ ಶ್ರೇಷ್ಠ ಸಂವಿಧಾನವೆಂದು ಹೆಮ್ಮೆಯಿಂದ ಹೇಳುವಂತಹದ್ದಾಗಿದೆ. ರಾಜ್ಯದ ಬೀದರಿಂದ ಹಿಡಿದು ಚಾಮರಾಜನಗರದ ವರೆಗೆ ಮಾನವ ಸರಪಳಿ ನಿರ್ಮಿಸಲಾಗಿದೆ. ಇದರ ಉದ್ದೇಶ ಸಂವಿಧಾನವನ್ನು ಇನ್ನು ಗಟ್ಟಿಗೊಳಿಸಲು, ಅದರ ಅರಿವು ಮೂಡಿಸುವುದಾಗಿದೆ ಎಂದರು.
             ಮುಂದಿನ ಪೀಳಿಗೆಗೆ ಸಂವಿಧಾನವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಾಗಿದೆ. ಪ್ರಜಾಪ್ರಭುತ್ವವನ್ನು ಎಲ್ಲರೂ ಆನಂದಿಸುವಂತಾಗಬೇಕಿದೆ. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸುವ ಮೂಲಕ ಅದರ ಮೌಲ್ಯವನ್ನು ಎತ್ತಿ ಹಿಡಿವುದ ಕಾರ್ಯ ಮಾಡಲಾಗುತ್ತಿದೆ. ಈ ಕಾರ್ಯದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಗುರುಗಳು, ಗುರುಮಾತೆಯರು, ವಿದ್ಯಾರ್ಥಿಗಳು, ಸಾರ್ವಜನಿಕರು ಇಷ್ಟೊಂದು ವಿಜೃಂಬನೆಯಿಂದ ಪಾಲ್ಗೊಂಡಿರುವುದಕ್ಕೆ ಸಚಿವರು ಅಭಿನಂದನೆ ಸಲ್ಲಿಸಿದರು.
            ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲ ಇದರ ಆಶೆ ಪೂರೈಸುವ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ 2500 ಕಿ.ಮೀ ವರೆಗೆ ಮಾನವ ಸರಪಳಿ ಮಾಡಿ ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳಿಸಲು ಅದರ ತತ್ವ, ವಿಚಾರಗಳನ್ನು ಜನತೆಗೆ ಮುಟ್ಟಿಸುವ ಕಾರ್ಯ ಮಾಡಿದೆ. ಪ್ರಮುಖವಾಗಿ ವ್ಯವಸ್ಥೆಯ ಮಹತ್ವ ಜನರಲ್ಲಿ ತಿಳಿಸುವುದಾಗಿದೆ ಎಂದರು. 
              ಶಾಸಕರು ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ಮಾತನಾಡಿ ದೇಶಕ್ಕೆ ಅರ್ಥಪೂರ್ಣವಾದ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ ನೀಡಿದ್ದು, ಅದರಲ್ಲಿ ಅಡಕವಾಗಿರುವ ಆಶಯ, ಅದರ ಹಿಂದೆ ಇರುವ ಸಮಾಜಿಕ ಕಳಕಳಿ, ಸಮಾನತೆ, ಭಾತೃತ್ವ ಸೇರಿದಂತೆ ಹತ್ತು ಹಲವಾರು ಮೌಲ್ಯಗಳನ್ನು ನಾವೆಲ್ಲರೂ ಅನುಸರಿಬೇಕು ಎಂದರು. ವಿಧಾನ ಪರಿಷತ್ ಸದಸ್ ಪಿ.ಎಚ್.ಪೂಜಾರ ಮಾತನಾಡಿ ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯುವ ಉದ್ದೇಶ, ಎಲ್ಲರಲ್ಲಿ ಸಮಾನತೆ ತರುವ ನಿಟ್ಟಿನಲ್ಲಿ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.
             ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಿಸಲಾಯಿತು. ಕಾರ್ಯಕ್ರಮದ ಪೂರ್ವದಲ್ಲಿ ನಾಡಗೀತೆ ಹಾಡಲಾಯಿತು. ಮಾನವ ಸರಪಳಿಯಲ್ಲಿ ಪಾಲ್ಗೊಂಡವರು ಕೈ ಕೈ ಹಿಡಿದುಕೊಂಡು ತಮ್ಮ ಎರಡು ಕೈಗಳನ್ನು ಮೇಲಕ್ಕೆ ಎತ್ತಿ ಹಿಡಿದು ಜೈಹಿಂದ್, ಜೈ ಕರ್ನಾಟಕ ಎಂಬ ಘೋಷಣೆಗಳನ್ನು ಕೂಗಲಾಯಿತು. ಇದೇ ರೀತಿಯಲ್ಲಿ ಆಲಮಟ್ಟಿಯಿಂದ ಸಾಲಹಳ್ಳಿಯವರೆಗೆ ನಿರ್ಮಿಸಲಾದ ಮಾನವ ಸರಪಳಿಯಲ್ಲಿ ಘೋಷಣೆ ಕೂಗಲಾಯಿತು.  
             ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು, ಪರಿಶಿಷ್ಟ ಜಾತಿ, ಪಂಡಗದ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಂತರ ಜಿಲ್ಲಾಡಳಿತದ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ