ನವನಗರದ ಬಸ್ ನಿಲ್ದಾಣದಲ್ಲಿ ದೀಪ ಸಂಜೀವಿನಿ ಕಾರ್ಯಕ್ರಮ
ದೀಪ ಸಂಜೀವಿನಿ ಕಾರ್ಯಕ್ರಮಕ್ಕೆ ಡಿಸಿ, ಸಿಇಓ ಚಾಲನೆ ಬಾಗಲಕೋಟೆ: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸಹಯೋಗದಲ್ಲಿ ನವನಗರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡ ದೀಪ ಸಂಜೀವಿನಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ.ಎಮ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ ಜಂಟಿಯಾಗಿ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ ಎನ್.ಆರ್.ಎಲ್.ಎಂ ಯೋಜನೆ ಮಹಿಳೆಯರು ಸ್ವಾವಲಂಬನೆಯಾಗಿ ಬದಕಲು ದಾರಿ ದೀಪವಾಗಿದೆ. ತಾವೇ ಉತ್ಪಾದಿಸಿದ ವಸ್ತುಗಳನ್ನು ಮಾರು ಮಳಿಗೆಯನ್ನು ಸಹ ಜಿಲ್ಲಾ ಪಂಚಾಯತಿಯವರು ನಿರ್ಮಿಸಿಕೊಟ್ಟಿದ್ದಾರೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಜಿ.ಪಂ ಸಿಇಓ ಮಾತನಾಡಿ ಈ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಚಟುವಟಿಕೆ ಕೈಗೊಳ್ಳಲು ಜಿ.ಪಿ.ಎಲ್.ಎಫ್ ಮೂಲಕ ಸಮುದಾಯ ಬಂಡವಾಳ ನಿಧಿ, ಸುತ್ತುನಿದಿ, ಬೀಜಧನ ಹಾಗೂ ಬ್ಯಾಂಕ ಮೂಲಕ ಸಾಲ ನೀಡಲಾಗುತ್ತಿದೆ ಎಂದು ತಿಳಿಸಿದರು. ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಮಣ್ಣಿನ ಹಣತೆಗಳು & ಎತ್ತುಗಳ ಮೂರ್ತಿಗಳು, ಅಗರಬತ್ತಿ, ಕರ್ಪೂರ, ಊಟದ ತಟ್ಟೆ, ರೊಟ್ಟಿ, ಮುತ್ತಿನ ದಂಡೆ, ಮುತ್ತ...