ನವನಗರದ ಬಸ್ ನಿಲ್ದಾಣದಲ್ಲಿ ದೀಪ ಸಂಜೀವಿನಿ ಕಾರ್ಯಕ್ರಮ

ದೀಪ ಸಂಜೀವಿನಿ ಕಾರ್ಯಕ್ರಮಕ್ಕೆ ಡಿಸಿ, ಸಿಇಓ ಚಾಲನೆ
ಬಾಗಲಕೋಟೆ: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸಹಯೋಗದಲ್ಲಿ ನವನಗರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡ ದೀಪ ಸಂಜೀವಿನಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ.ಎಮ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ ಜಂಟಿಯಾಗಿ ಉದ್ಘಾಟಿಸಿದರು. 
           ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ ಎನ್.ಆರ್.ಎಲ್.ಎಂ ಯೋಜನೆ ಮಹಿಳೆಯರು ಸ್ವಾವಲಂಬನೆಯಾಗಿ ಬದಕಲು ದಾರಿ ದೀಪವಾಗಿದೆ. ತಾವೇ ಉತ್ಪಾದಿಸಿದ ವಸ್ತುಗಳನ್ನು ಮಾರು ಮಳಿಗೆಯನ್ನು ಸಹ ಜಿಲ್ಲಾ ಪಂಚಾಯತಿಯವರು ನಿರ್ಮಿಸಿಕೊಟ್ಟಿದ್ದಾರೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. 
           ಜಿ.ಪಂ ಸಿಇಓ ಮಾತನಾಡಿ ಈ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಚಟುವಟಿಕೆ ಕೈಗೊಳ್ಳಲು ಜಿ.ಪಿ.ಎಲ್.ಎಫ್ ಮೂಲಕ ಸಮುದಾಯ ಬಂಡವಾಳ ನಿಧಿ, ಸುತ್ತುನಿದಿ, ಬೀಜಧನ ಹಾಗೂ ಬ್ಯಾಂಕ ಮೂಲಕ ಸಾಲ ನೀಡಲಾಗುತ್ತಿದೆ ಎಂದು ತಿಳಿಸಿದರು. 
            ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಮಣ್ಣಿನ ಹಣತೆಗಳು & ಎತ್ತುಗಳ ಮೂರ್ತಿಗಳು, ಅಗರಬತ್ತಿ, ಕರ್ಪೂರ, ಊಟದ ತಟ್ಟೆ, ರೊಟ್ಟಿ, ಮುತ್ತಿನ ದಂಡೆ, ಮುತ್ತಿನ ತೆನೆ, ಪಾಪಡ್, ವಿವಿಧ ವಿನ್ಯಾಸದ ಕಾಟನ್ ಹಾಗೂ ಜ್ಯೂಟ್ ಬ್ಯಾಗ & ಪರ್ಸಗಳು, ಇಳಕಲ್ ಹಾಗೂ ರಬಕವಿ ಬನಹಟ್ಟಿ ಸೀರೆಗಳ ಮಾರಾಟಕ್ಕೆ ಅವಕಾಶಕಲ್ಪಿಸಲಾಗಿದ್ದು, ಅವುಗಳನ್ನು ವೀಕ್ಷಿಸುವದರು.
          ಕಾರ್ಯಕ್ರಮದಲ್ಲಿ ಜಿ.ಪಂ ಯೋಜನಾ ನಿರ್ದೇಶಕರು ಡಾ.ಪುನೀತ್ ಬಿ.ಆರ್, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಹಾಗೂ ಬಾಗಲಕೋಟೆ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ್ ಸಂಪಗಾಂವಿ ಮತ್ತು ಜಿಲ್ಲಾ ಅಭಿಯಾನ ನಿರ್ವಹಣಾ ಘಟಕದ ಜಿಲ್ಲಾ ಸಿಬ್ಬಂದಿಗಳು ಹಾಗೂ ತಾಲೂಕಿನ ಸಿಬ್ಬಂದಿಗಳು ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ