ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ


 
ಬಾಗಲಕೋಟೆ, ಫೆಬ್ರವರಿ 25: ಕರ್ನಾಟಕ ಪ್ರದೇಶ ಕುರುಬರ ಸಂಘ (ರಿ) ಬಾಗಲಕೋಟೆ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿದ್ದ ಡಿ.ಬಿ. ಸಿದ್ದಾಪುರರನ್ನು ಅವರ ಸ್ಥಾನದಿಂದ ವಿಮುಕ್ತಿಗೊಳಿಸಿರುವ ಕುರಿತು ಸಂಘದ ವತಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ಸಂಘದ ಪ್ರಕಟಣೆಯ ಪ್ರಕಾರ, ಡಿ.ಬಿ.ಸಿದ್ದಾಪುರ  ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸಮಾಜದ ಸಂಘಟನೆ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ನಿರೀಕ್ಷಿತ ಮಟ್ಟದ ಚಟುವಟಿಕೆ ತೋರದಿರುವುದಾಗಿ ಆರೋಪಿಸಲಾಗಿದೆ. ಜೊತೆಗೆ, ಅವರ ಅಧಿಕಾರಾವಧಿ ಈಗಾಗಲೇ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಂಘದ ನಿಯಮಾನುಸಾರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.


ಈ ಸಂಬಂಧ ಫೆಬ್ರವರಿ 25, 2026ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದು, ಇನ್ನು ಮುಂದೆ ಸಿದ್ದಾಪುರರು ಬಾಗಲಕೋಟೆ ಜಿಲ್ಲಾ  ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಅರ್ಹರಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.


ಸಂಘದ ಹಿರಿಯ ಪದಾಧಿಕಾರಿಗಳು ಈ ನಿರ್ಧಾರವನ್ನು ಒಮ್ಮತದಿಂದ ಕೈಗೊಂಡಿದ್ದು, ಸಂಘದ ಸಂಘಟನೆ ಬಲಪಡಿಸುವುದು ಹಾಗೂ ಸಮಾಜದ ಅಭಿವೃದ್ಧಿಗೆ ಹೆಚ್ಚು  ಪ್ರಾಮುಖ್ಯತೆ ನೀಡುವುದು ಮುಖ್ಯ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ  ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಸಂಘದ ಅಧ್ಯಕ್ಷರಾದ ಎಂ. ಈರಣ್ಣ, ಕಾರ್ಯಾಧ್ಯಕ್ಷರ ಬಸವರಾಜ ಲ. ಬಸಲಿಗುಂದಿ, ಪ್ರಧಾನ ಕಾರ್ಯದರ್ಶಿ ಎಂ.ವಿ.ಸೋಮಶೇಖರ್ ಹಾಗೂ ಖಜಾಂಚಿ ಕೆ.ಎಂ. ಕೃಷ್ಣಮೂರ್ತಿ  ಅವರು ಸಂಯುಕ್ತವಾಗಿ ಪ್ರಕಟಣೆ ಹೊರಡಿಸಿ, ಸಂಘದ ಹಿತಾಸಕ್ತಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ