ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಪರ ವಾತಾವರಣ, ಉಮೇಶ್ ಮೇಟಿ ಗೆಲುವು ಖಚಿತ – ಬಲರಾಮ್ ಪವಾರ್


ಬಾಗಲಕೋಟೆ: ಉಪಚುನಾವಣೆಯ ಹಿನ್ನೆಲೆ ನೀಲಾನಗರ ತಾಂಡಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಬಲರಾಮ ಪವಾರ್ ಮಾತನಾಡಿ, ಬಂಜಾರ ಸಮಾಜದ ಮತಗಳು ಕಾಂಗ್ರೆಸ್ ಪರವಾಗಿ ಬರುತ್ತಿವೆ. ಬಾಗಲಕೋಟೆಯ ಪ್ರತಿಯೊಂದು ಗ್ರಾಮೀಣ ಪ್ರದೇಶದಲ್ಲಿಯೂ ಕಾಂಗ್ರೆಸ್ ಪರವಾಗಿ ಮತಗಳು ಹಾಕಲಾಗುತ್ತವೆ ಎಂದು ಗ್ರಾಮೀಣ ಜನತೆ ಹಾಗೂ ಕಾರ್ಯಕರ್ತರು ಹೇಳುತ್ತಿದ್ದಾರೆ ಎಂದು ಅವರು ಹೇಳಿದರು.
ಈ ಎಲ್ಲಾ ಬೆಳವಣಿಗೆಗಳಿಂದ ಈ ಉಪಚುನಾವಣೆಯಲ್ಲಿ ಬಾಗಲಕೋಟೆಯಿಂದ ಉಮೇಶ್ ಮೇಟಿ ಗೆಲ್ಲುವುದು ಖಚಿತ. ನಮ್ಮ ಸರ್ಕಾರ “ನುಡಿದಂತ ನಡೆದ ಸರ್ಕಾರ” ಆಗಿದ್ದು, ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿರುವುದರಿಂದ ಜನರು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟಿದ್ದಾರೆ.
ಬಾಗಲಕೋಟೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕಾಂಗ್ರೆಸ್ ಪರವಾಗಿ ಜನ ಮಾತನಾಡುತ್ತಿರುವುದು ಪಕ್ಷದ ಬಲವನ್ನು ತೋರಿಸುತ್ತಿದೆ. ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಲರಾಮ್ ಪವಾರ್ ಹೇಳಿದ್ದಾರೆ.
ತಾಲೂಕಿನ ವಿವಿಧ ತಾಂಡಾಗಳಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರು ಸಾಕಷ್ಟು ಬೆಂಬಲ ಸೂಚಿಸಿದ್ದು, ಇದು ಉಪಚುನಾವಣೆಯಲ್ಲಿ ಪಕ್ಷಕ್ಕೆ ಇನ್ನಷ್ಟು ಬಲ ನೀಡಲಿದೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ