ಮಹಿಳಾ ಮೀಸಲಾತಿ ಅಪಪ್ರಚಾರ ವಿರೋಧಿಸಿ ನಾಳೆ ಪ್ರತಿಭಟನೆ

ಬಾಗಲಕೋಟೆ, ಏ.21: ಮಹಿಳಾ ಮೀಸಲಾತಿ ವಿಚಾರದಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಏ.22ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷ ಬದ್ಧವಾಗಿದ್ದು, ಮಹಿಳೆಯರ ಹಕ್ಕುಗಳ ಪರ ಸದಾ ನಿಂತಿದೆ. ಆದರೆ ಈ ವಿಷಯದಲ್ಲಿ ಬಿಜೆಪಿ ನಾಯಕರು ಸುಳ್ಳು ಮಾಹಿತಿಯನ್ನು ಹಬ್ಬಿಸಿ ಜನರಲ್ಲಿ ಗೊಂದಲ ಉಂಟುಮಾಡುತ್ತಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಆರೋಪಿಸಿದೆ.

ಈ ಹಿನ್ನೆಲೆಯಲ್ಲಿ ಅಪಪ್ರಚಾರ ಖಂಡನೆ ಹಾಗೂ ಮಹಿಳಾ ಹಕ್ಕುಗಳ ರಕ್ಷಣೆಗೆ ಪ್ರತಿಭಟನೆ ಆಯೋಜಿಸಲಾಗಿದೆ. ಜಿಲ್ಲೆಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಲಾಗಿದೆ.

ಪ್ರತಿಭಟನೆ ಬಸವೇಶ್ವರ ಸರ್ಕಲ್‌ನಲ್ಲಿ ಬುಧವಾರ (ಏ.22) ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ.

ಮಹಿಳಾ ಮೀಸಲಾತಿ ಕುರಿತು ಸತ್ಯವನ್ನು ಜನತೆಗೆ ತಲುಪಿಸುವುದು ನಮ್ಮ ಕರ್ತವ್ಯ. ಬಿಜೆಪಿ ನಡೆಸುತ್ತಿರುವ ಸುಳ್ಳು ಪ್ರಚಾರವನ್ನು ಖಂಡಿಸುತ್ತೇವೆ,” ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರಾ ಗುಳಬಾಳ ಹಾಗೂ ಬ್ಲಾಕ್ ಅಧ್ಯಕ್ಷೆ ರೇಣುಕಾ ನ್ಯಾಮಗೌಡ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ