ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟ: ವಿದ್ಯಾರ್ಥಿಗಳ ನಿರೀಕ್ಷೆಗೆ ತೆರೆ
2026ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶವು ಇಂದು ಅಧಿಕೃತವಾಗಿ ಪ್ರಕಟವಾಗಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿ ಫಲಿತಾಂಶ ಪ್ರಕಟಿಸಿದೆ.
ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯ ಮೂಲಕ ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಹಾಗೂ kseab.karnataka.gov.inಗಳಲ್ಲಿ ಫಲಿತಾಂಶ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ‘KarnatakaOne’ ಮೊಬೈಲ್ ಆಪ್ ಮೂಲಕವೂ ಫಲಿತಾಂಶ ಪಡೆಯಬಹುದಾಗಿದೆ.
ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಮಾಹಿತಿ ತಲುಪಿಸುವ ನಿಟ್ಟಿನಲ್ಲಿ, ಅಭ್ಯರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ನೇರವಾಗಿ ವಾಟ್ಸಾಪ್ ಅಥವಾ ಎಸ್‌ಎಂಎಸ್ ಮೂಲಕ ಫಲಿತಾಂಶದ ವಿವರಗಳನ್ನು ಕಳುಹಿಸುವ ವ್ಯವಸ್ಥೆಯನ್ನು ಮಂಡಳಿಯು ಜಾರಿಗೆ ತಂದಿದೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.
ಶಾಲೆಗಳ ಮುಖ್ಯಸ್ಥರಿಗೆ ಮಂಡಳಿಯ ಲಾಗಿನ್ ಮೂಲಕ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪಟ್ಟಿಯನ್ನು ಲಭ್ಯಗೊಳಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಶಾಲೆಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಖಚಿತಪಡಿಸಿಕೊಳ್ಳಬಹುದು.
ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಈ ಫಲಿತಾಂಶ ಮಹತ್ವದ್ದಾಗಿದ್ದು, ಪಾರದರ್ಶಕವಾಗಿ ಪ್ರಕ್ರಿಯೆ ನಡೆಸಲಾಗಿದೆ ಎಂದು ಮಂಡಳಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದಾರೆ
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ