ಬಾಗಲಕೋಟ ಉಪಚುನಾವಣೆ ಗದ್ದಲದ ಬಳಿಕ ಕಾಂಗ್ರೆಸ್ ಶಾಕ್: ಮೂವರು ನಾಯಕರ ಮೇಲೆ ಕ್ರಮ

ಬಾಗಲಕೋಟ ಉಪಚುನಾವಣೆಯ ಬಳಿಕ ಆಕ್ಷನ್: ಕಾಂಗ್ರೆಸ್‌ನಿಂದ 3 ನಾಯಕರು ಔಟ್! 

ಬಾಗಲಕೋಟೆ: ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಕ್ರಮಗಳು ತೀವ್ರಗೊಂಡಿದ್ದು, ಪಕ್ಷ ವಿರೋಧ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಹಲವು ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಇತ್ತೀಚಿನ ಉಪಚುನಾವಣೆಯಲ್ಲಿ ಕಮತಗಿ ಪಟ್ಟಣ ಪಂಚಾಯಿತಿಯಲ್ಲಿ ಪಕ್ಷ ವಿರೋಧ ಚಟುವಟಿಕೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿದ್ದ ಮುರುಗೇಶ ಕಡ್ಲಿಮಟ್ಟಿ, ಗುರು ಪಾಟೀಲ್ ಹಾಗೂ ರಮೇಶ್ ಜಮಖಂಡಿ ವಿರುದ್ಧ ಪಟ್ಟಣ ಪಂಚಾಯಿತಿ ಸದಸ್ಯರು ಮತ್ತು ಕಾಂಗ್ರೆಸ್ ಮುಖಂಡರು ಜಿಲ್ಲಾ ಕಾಂಗ್ರೆಸ್ ಸಮಿತಿಗೆ ದೂರು ಸಲ್ಲಿಸಿದ್ದರು. ದೂರಿನಲ್ಲಿ, ಈ ಇಬ್ಬರು ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಗೆ ವಿರೋಧವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಪಕ್ಷದ ಶಿಸ್ತುಗೆ ಧಕ್ಕೆಯಾಗಿದೆ ಎಂದು ಸ್ಥಳೀಯ ಮುಖಂಡರು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಿಗೆ ತಿಳಿಸಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ, “ದೂರುವನ್ನು ಕೆಪಿಸಿಸಿ (KPCC)ಗೆ ಕಳುಹಿಸಲಾಗಿದೆ. ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿದ್ದರೆ ಪಕ್ಷದಿಂದ ಹೊರಹಾಕುವ ಕ್ರಮವೂ ಕೈಗೊಳ್ಳಲಾಗುತ್ತದೆ,” ಎಂದು ತಿಳಿಸಿದ್ದರು
ಇದಾದ ಬಳಿಕ, ಉಪಚುನಾವಣೆಯ ಮತದಾನ ಮುಕ್ತಾಯವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು ಕಠಿಣ ಕ್ರಮ ಕೈಗೊಂಡಿದ್ದು, ಮೂವರು ನಾಯಕರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಪಕ್ಷ ಪರವಾಗಿ ಸಮರ್ಪಕವಾಗಿ ಕೆಲಸ ಮಾಡಿಲ್ಲ ಎಂಬ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿದ್ದ ಮುರುಗೇಶ ಕಡ್ಲಿಮಟ್ಟಿ, ಪಟ್ಟಣ ಪಂಚಾಯಿತಿ ಸದಸ್ಯ ರಮೇಶ್ ಜಮಖಂಡಿ ಹಾಗೂ ಗುರು ಪಾಟೀಲ್ ಅವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ ಆದೇಶ ಹೊರಡಿಸಿದ್ದಾರೆ.




ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ