ಬಿಸಿಲಿನ ತಾಪಮಾನ ಏರಿಕೆ: ಸಾರ್ವಜನಿಕರಿಗೆ ಎಚ್ಚರಿಕೆ | ವೀಣಾ ಕಷಾಪ್ಪನವರು

ಸಾರ್ವಜನಿಕರಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಅಗತ್ಯವಾಗಿದೆ. 
ಬಿಸಿಲಿನ ತೀವ್ರತೆಯಿಂದ ದೇಹದಲ್ಲಿ ನೀರಿನ ಕೊರತೆ, ತಲೆನೋವು, ದೌರ್ಬಲ್ಯ ಹಾಗೂ ಹೀಟ್ ಸ್ಟ್ರೋಕ್‌ನಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಜನರು ಅಗತ್ಯವಿಲ್ಲದ ಹೊರಗಡೆ ಹೋಗುವುದನ್ನು ತಪ್ಪಿಸಿ, ಸಾಕಷ್ಟು ನೀರು ಕುಡಿಯುವುದು ಮತ್ತು ಹಗುರವಾದ ಆಹಾರ ಸೇವಿಸುವುದು ಉತ್ತಮ.

ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಬಿಸಿಲಿನ ತಾಪಮಾನ ಹೆಚ್ಚು ಇರುವುದರಿಂದ ಈ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ. ಹೊರಗೆ ಹೋಗಬೇಕಾದರೆ ಟೋಪಿ, ಉಂಬ್ರೆಲ್ಲಾ ಅಥವಾ ತುಪ್ಪಟ್ಟೆ ಬಳಸಿ ದೇಹವನ್ನು ರಕ್ಷಿಸಿಕೊಳ್ಳಬೇಕು.

ಮಕ್ಕಳು, ವೃದ್ಧರು ಮತ್ತು ಗರ್ಭಿಣಿಯರು ವಿಶೇಷವಾಗಿ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ದೇಹದಲ್ಲಿ ಯಾವುದೇ ಅಸಹಜ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಮುಖ್ಯ ಎಂದು ಅವರು ಹೇಳಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ