ಬಾಗಲಕೋಟ ಉಪ ಚುನಾವಣೆ : ಮತ ಎಣಿಕೆ ಸಿಬ್ಬಂದಿಗಳಿಗೆ ತರಬೇತಿ



ಬಾಗಲಕೋಟೆ,: ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಮೇ 4ರಂದು ನಡೆಯಲಿರುವ ಮತ ಎಣಿಕೆ ಕಾರ್ಯದ ಹಿನ್ನಲೆಯಲ್ಲಿ, ಮತ ಎಣಿಕೆ ಸಿಬ್ಬಂದಿಗಳಿಗೆ ಜಿಲ್ಲಾ ಆಡಳಿತವು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿತು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಈ ತರಬೇತಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಂಗಪ್ಪ ಅವರು, ಮತ ಎಣಿಕೆ ಕಾರ್ಯಕ್ಕೆ ನೇಮಕಗೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳು ಜವಾಬ್ದಾರಿಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಿದರು. ಮತ ಎಣಿಕೆ ಕಾರ್ಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಈಗಾಗಲೇ ಕೇಂದ್ರವನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದೆ ಎಂದು ತಿಳಿಸಿದರು.
ಮತ ಎಣಿಕೆಗೆ ಒಟ್ಟು 14 ಟೇಬಲ್‌ಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಟೇಬಲ್‌ಗೆ ಮೇಲ್ವಿಚಾರಕ, ಸಹಾಯಕ ಹಾಗೂ ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ. ಒಟ್ಟು 63 ಸಿಬ್ಬಂದಿಗಳು ಈ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಅಂಚೆ ಮತಪತ್ರಗಳ ಎಣಿಕೆಗೆ ಪ್ರತ್ಯೇಕ ಕೊಠಡಿ ಮತ್ತು 2 ಟೇಬಲ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಸ್ಕ್ಯಾನಿಂಗ್‌ಗಾಗಿ ವಿಶೇಷ ಟೇಬಲ್ ಕೂಡ ಇರಿಸಲಾಗಿದೆ.
ಮಾಸ್ಟರ್ ಟ್ರೈನರ್ ಶಶಿಶೇಖರ ರೆಡ್ಡಿ ಅವರು ಪ್ರಾತ್ಯಕ್ಷಿಕೆಯ ಮೂಲಕ ಮತ ಎಣಿಕೆ ಪ್ರಕ್ರಿಯೆಯ ಎಲ್ಲಾ ಹಂತಗಳನ್ನು ವಿವರಿಸಿದರು. ವಿವಿಎಂ ಯಂತ್ರಗಳ ಬಳಕೆ, ವಿವಿಪ್ಯಾಟ್ ಸ್ಲಿಪ್ ಪರಿಶೀಲನೆ ಹಾಗೂ ಮತ ಎಣಿಕೆ ವೇಳೆ ಪಾಲಿಸಬೇಕಾದ ನಿಯಮಗಳು ಕುರಿತು ಸಮಗ್ರ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರರಾದ ವಾಸುದೇವ ಸ್ವಾಮಿ, ಡಾ. ಪ್ರದೀಪಕುಮಾರ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ