ಬಿಸಿಲಿನಿಂದ ಹೈರಾಣಾದ ಜನರಿಗೆ ತಂಪಿನ ಸುದ್ದಿ: ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಏ.19: ರಾಜ್ಯದಲ್ಲಿ ಉಷ್ಣಾಂಶ ಏರಿಕೆಯಿಂದ ಜನಜೀವನ ಸಂಕಷ್ಟಕ್ಕೊಳಗಾಗಿರುವ ಸಂದರ್ಭದಲ್ಲಿ, ಇಂಡಿಯಾ ಮೀಟರೊಲಾಜಿಕಲ್ ಡಿಪಾರ್ಟ್ಮೆಂಟ್ರಾ ಜ್ಯದಾದ್ಯಂತ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯದ ಅನೇಕ ಭಾಗಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಬಿಸಿಲಿನ ತಾಪದಿಂದ ಜನರು ಹೈರಾಣಾಗಿದ್ದಾರೆ. ಈ ನಡುವೆಯೇ ಮಳೆಯ ಸೂಚನೆ ಹೊರಬಿದ್ದಿರುವುದು ಸ್ವಲ್ಪ ತಂಪು ನೀಡುವಂತಾಗಿದೆ.
ಏಪ್ರಿಲ್ 21ರಂದು ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಚಾಮರಾಜನಗರ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಅದೇ ರೀತಿ ಏಪ್ರಿಲ್ 22 ಮತ್ತು 23ರಂದು ಸಹ ಮಳೆಯ ಪ್ರಮಾಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಇದಲ್ಲದೆ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಕೂಡ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನೊಂದೆಡೆ ಕರಾವಳಿ ಭಾಗಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆಯನ್ನು ಸಹ ನೀಡಲಾಗಿದೆ. ಮಧ್ಯಾಹ್ನ ವೇಳೆ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.
ನಮ್ಮಲ್ಲಿ ಮಳೆ ಆಗಾಗಅತ್ತದರ ರೀ
ಪ್ರತ್ಯುತ್ತರಅಳಿಸಿ