ಬೈರಮಟ್ಟಿ ಗ್ರಾಮದಲ್ಲಿ ಹೆಮರಡ್ಡಿ ಮಲ್ಲಮ್ಮನವರ 604ನೇ ಜಯಂತಿಗೆ ಶಾಸಕ ಉಮೇಶ್ ಮೇಟಿ ಚಾಲನೆ

ಬಾಗಲಕೋಟೆ, ಮೇ 20: ಬಾಗಲಕೋಟೆ ತಾಲೂಕಿನ ಬೈರಮಟ್ಟಿ ಗ್ರಾಮದಲ್ಲಿ ಶ್ರೀ ಮಹಾಸಾದ್ವಿ ಶಿವಶರಣೆ ಹೆಮರಡ್ಡಿ ಮಲ್ಲಮ್ಮನವರ 604ನೇ ಜಯಂತೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಾಸಕ ಉಮೇಶ್ ಮೇಟಿ ಚಾಲನೆ ನೀಡಿದರು.
ಜಯಂತೋತ್ಸವದ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ವಿವಿಧ ಕಲಾತಂಡಗಳು, ಭಜನಾ ಮಂಡಳಿಗಳು ಹಾಗೂ ಭಕ್ತರು ಭಾಗವಹಿಸಿ ಜಯಂತೋತ್ಸವಕ್ಕೆ ವಿಶೇಷ ಮೆರುಗು ತಂದರು. ಶಾಸಕ ಉಮೇಶ್ ಮೇಟಿ ಅವರು ಹೆಮರಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕ ಉಮೇಶ್ ಮೇಟಿ, “ಶ್ರೀ ಹೆಮರಡ್ಡಿ ಮಲ್ಲಮ್ಮನವರು ಸಮಾಜಕ್ಕೆ ಆದರ್ಶ ಬದುಕಿನ ಸಂದೇಶ ನೀಡಿದ ಮಹಾನ್ ಶಿವಶರಣೆ. ಅವರ ತತ್ವ, ಆದರ್ಶಗಳು ಇಂದಿನ ಯುವಜನತೆಗೆ ಪ್ರೇರಣೆಯಾಗಿವೆ. ಸಮಾಜದಲ್ಲಿ ಶಾಂತಿ, ಸಹನೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ,” ಎಂದು ಹೇಳಿದರು.

ಗ್ರಾಮದ ಜನರು ಹಾಗೂ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಜಯಂತೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಬಸವಂತಪ್ಪ ಮೇಟಿ, ಮಲ್ಲಿಕಾರ್ಜುನ ಮೇಟಿ, ಪ್ರಭು ಅಲಗುಂದಿ, ಸಿದಪ್ಪ ಕುರಿ, ನಿಂಗಣ್ಣ ಕೋಟಿ, ಎಸ್.ಎನ್. ರಾಂಪುರ, ಲಕ್ಸಣ್ಣ ದಡ್ಡಿ, ಮಂಜುಳಾ ಕಮತಗಿ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ