ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿ ಮಾಡಿದ ಶಾಸಕ ಉಮೇಶ್ ಮೇಟಿ
ಬೆಂಗಳೂರು, ಮೇ 20: ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್ ಹುಲ್ಲಪ್ಪ ಮೇಟಿ ಅವರು ಇಂದು ಬೆಂಗಳೂರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಪಕ್ಷದ ಪರವಾಗಿ ನೀಡಿದ ಮಾರ್ಗದರ್ಶನ, ಬೆಂಬಲ ಹಾಗೂ ಸಹಕಾರಕ್ಕಾಗಿ ಶಾಸಕ ಉಮೇಶ್ ಮೇಟಿ ಅವರು ಧನ್ಯವಾದಗಳನ್ನು ತಿಳಿಸಿದರು. ಪಕ್ಷ ಸಂಘಟನೆ ಹಾಗೂ ಕ್ಷೇತ್ರದ ಅಭಿವೃದ್ಧಿ ಕುರಿತು ಈ ವೇಳೆ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ನಾಗರಾಜ್ ಎಸ್. ಹದ್ಲಿ ಹಾಗೂ ಮುಖಂಡ ಮಲ್ಲಿಕಾರ್ಜುನ ಚರಂತಿಮಠ ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ