ಅಲ್ಪಸಂಖ್ಯಾತರ ಅಭಿವೃದ್ಧಿ ಕುರಿತು ಸಚಿವರೊಂದಿಗೆ ಚರ್ಚಿಸಿದ ಉಮೇಶ್ ಮೇಟಿ
ಬೆಂಗಳೂರು, ಮೇ 26: ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಅವರು ಇಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಉಮೇಶ್ ಮೇಟಿ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸನ್ಮಾನಿಸಿ ಗೌರವ ಸಲ್ಲಿಸಿದರು. ಬಳಿಕ ಸಚಿವರು ಕೂಡ ಶಾಸಕ ಉಮೇಶ್ ಮೇಟಿ ಅವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.
ಸಭೆಯಲ್ಲಿ ಬಾಗಲಕೋಟೆ ಕ್ಷೇತ್ರದ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳು, ಮೂಲಸೌಕರ್ಯ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಯಿತು. ಇದೇ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ₹5 ಕೋಟಿ ಅನುದಾನ ನೀಡಿರುವುದಾಗಿ ತಿಳಿಸಿದರು.
ಜೊತೆಗೆ, “ನಾನು ಶೀಘ್ರದಲ್ಲೇ ಬಾಗಲಕೋಟೆಗೆ ಬರುತ್ತಿದ್ದೇನೆ. ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದ್ದರೆ ತಿಳಿಸಿ, ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡಲಾಗುವುದು,” ಎಂದು ಭರವಸೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕ ಉಮೇಶ್ ಮೇಟಿ, “ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಸರ್ಕಾರದ ಸಹಕಾರ ಅತ್ಯಂತ ಅಗತ್ಯವಾಗಿದೆ. ಸಚಿವರು ನೀಡಿರುವ ಅನುದಾನ ಹಾಗೂ ಬೆಂಬಲದಿಂದ ಕ್ಷೇತ್ರದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ,” ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಸವಂತಪ್ಪ ಮೇಟಿ, ಹೊಳಬಸು ಶೆಟ್ಟರ್, ಮಲ್ಲಿಕಾರ್ಜುನ ಮೇಟಿ, ಎಸ್.ಎನ್. ರಾಂಪುರ, ಭರತ್‌ಕುಮಾರ್ ಈಟಿ, ದ್ಯಾಮಣ್ಣ ಗಾಳಿ, ಅಕ್ಬರ್ ಮುಲ್ಲಾ, ರಜಕ್ ಬೆನ್ನೂರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ