ಸಿಎಂ ಬದಲಾವಣೆ ಚರ್ಚೆಗೆ ಟ್ವಿಸ್ಟ್‌; ಸಿದ್ದರಾಮಯ್ಯ ಮಾತಿಗೆ ಡಿಕೆಶಿ ಕಾದು ಕುಳಿತಾರಾ?

ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತು ಕೇಳಿಬರುತ್ತಿರುವ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಹೊಸ ಕುತೂಹಲ ಹುಟ್ಟಿಸಿವೆ. ಹೈಕಮಾಂಡ್ ಸೂಚನೆ ಇದೆ ಎನ್ನುವ ಸುದ್ದಿ ಹರಿದಾಡುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಬೆಂಬಲಿಗರು ಅವರು ಮುಂದುವರಿಯಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಈ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದಿನ ರಾಜಕೀಯ ಬೆಳವಣಿಗೆಗಳತ್ತ ಗಮನ ಹರಿಸಿದ್ದಾರೆ. ಹಲವು ಬಾರಿ “ನಾಯಕತ್ವ ಕುರಿತು ನಮ್ಮೊಳಗೆ ಮಾತುಕತೆ ನಡೆದಿದೆ” ಎಂದು ಹೇಳಿಕೊಂಡಿದ್ದ ಡಿಕೆಶಿ, ಈಗ ಸಿದ್ದರಾಮಯ್ಯ ಅವರ ಅಧಿಕೃತ ಪ್ರತಿಕ್ರಿಯೆಗೆ ಕಾಯುತ್ತಿರುವಂತೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಇದುವರೆಗೆ ಸಿದ್ದರಾಮಯ್ಯ ಅವರು “ಹೈಕಮಾಂಡ್ ತೀರ್ಮಾನವೇ ಅಂತಿಮ” ಎಂದು ಹೇಳುತ್ತ ಬಂದಿದ್ದರು. ಆದರೆ ಈಗ ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ಅವರು ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಹಾಗೂ ಡಿಕೆಶಿಯೊಂದಿಗೆ ನಡೆದ ಮಾತುಕತೆ ಬಗ್ಗೆ ಸ್ಪಷ್ಟನೆ ನೀಡುತ್ತಾರಾ ಎಂಬ ಕುತೂಹಲ ಹೆಚ್ಚಾಗಿದೆ.

ಒಂದು ಕಡೆ ಕಾಂಗ್ರೆಸ್ ಒಳರಾಜಕೀಯ ಗರಿಗೆದರಿದರೆ, ಮತ್ತೊಂದು ಕಡೆ “ಒಪ್ಪಂದ ನಿಜವಾಗಿತ್ತಾ?” ಎನ್ನುವ ಪ್ರಶ್ನೆಗೂ ಉತ್ತರ ಸಿಗಬಹುದೇ ಎಂಬ ನಿರೀಕ್ಷೆ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರ ಮುಂದಿನ ಹೇಳಿಕೆ ರಾಜ್ಯ ರಾಜಕೀಯದ ದಿಕ್ಕನ್ನೇ ಬದಲಾಯಿಸಬಹುದೆಂಬ ಮಾತುಗಳು ಕೇಳಿಬರುತ್ತಿವೆ.

ವರದಿ :ಅಡಿವೆಪ್ಪ ಸರೂರ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ