ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬೇಕು: ಮುತ್ತಣ್ಣ ಕಳಗೋಡಿ
ಬಾಗಲಕೋಟೆ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ರಾಜಕೀಯ ಚರ್ಚೆಗಳು ಜೋರಾಗಿರುವ ನಡುವೆ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹ ಮತ್ತಷ್ಟು ಬಲಗೊಂಡಿದೆ. ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲಿ ವಿಜಯಾನಂದ ಕಾಶಪ್ಪನವರಿಗೆ ಸ್ಥಾನ ಕಲ್ಪಿಸಬೇಕು ಎಂದು ಮತಕ್ಷೇತ್ರದ ಜನರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.
ಈ ಕುರಿತು ಮಾತನಾಡಿದ ಮುತ್ತಣ್ಣ ಕಳಗೋಡಿವರು 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ವಿಜಯಾನಂದ ಕಾಶಪ್ಪನವರು ತಮ್ಮ ಕ್ಷೇತ್ರದಲ್ಲಿ ಮಾತ್ರವಲ್ಲದೆ ರಾಜ್ಯದ ವಿವಿಧ ಭಾಗಗಳಲ್ಲಿ ಪಕ್ಷ ಸಂಘಟನೆ ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಪಕ್ಷದ ಗೆಲುವಿಗಾಗಿ ನಿರಂತರವಾಗಿ ದುಡಿದಿರುವ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ನ್ಯಾಯ ಒದಗಿಸಬೇಕು.
ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಿದರೆ ಉತ್ತರ ಕರ್ನಾಟಕ ಭಾಗಕ್ಕೆ ಮತ್ತಷ್ಟು ಬಲ ಸಿಗಲಿದೆ. ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿಗೆ ಅವರ ಅನುಭವ ಮತ್ತು ನಾಯಕತ್ವ ಸಹಕಾರಿಯಾಗಲಿದೆ.
ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ನಾಯಕರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡುವುದು ಕಾಂಗ್ರೆಸ್ ನಾಯಕತ್ವದ ಜವಾಬ್ದಾರಿಯಾಗಿದೆ. ಆದ್ದರಿಂದ ವಿಜಯಾನಂದ ಕಾಶಪ್ಪ ಅವರನ್ನು ಸಚಿವರನ್ನಾಗಿ ನೇಮಕ ಮಾಡಿ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿಯೂ ಅವಕಾಶ ಕಲ್ಪಿಸಬೇಕು ಎಂದು ಮುತ್ತಣ್ಣ ಕಳಗೋಡಿವರು ಒತ್ತಾಯಿಸಿದರು.
ವರದಿ :ಅಡಿವೆಪ್ಪ ಸರೂರ
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ