NEET ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ABVP ಪ್ರತಿಭಟನೆ

ಬಾಗಲಕೋಟೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ವತಿಯಿಂದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ನಗರದಲ್ಲಿ ಭಾರೀ ಪ್ರತಿಭಟನೆ ಹಾಗೂ ರ್ಯಾಲಿ ನಡೆಯಿತು.

ಎಪಿಎಂಸಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ರ್ಯಾಲಿಯಲ್ಲಿ 100ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರ್ಯಾಲಿ ಬಳಿಕ ಜಿಲ್ಲಾಧಿಕಾರಿಗಳು ಹಾಗೂ ಸಂಸದರಿಗೆ ಮನವಿ ಪತ್ರ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಯಿತು.

ಈ ಪ್ರತಿಭಟನೆಯನ್ನು ABVP ವಿಭಾಗ ಸಂಚಾಲಕ ಪ್ರಥಮೇಶ್ ವಾಘಮೋಡೆ ಅವರ ನೇತೃತ್ವದಲ್ಲಿ ಹಾಗೂ ಜಿಲ್ಲಾ ಸಂಚಾಲಕ ವಿಪುಲ್ ಪೇಟ್ಕರ್ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿತ್ತು.

ಪ್ರತಿಭಟನೆಯಲ್ಲಿ ರವಿ ದಂಡಗಿ, ಸುಮಾ, ತರುಣ್, ಬಸವರಾಜ್, ಕಾರ್ತಿಕ್, ಪುರುಷೋತ್ತಮ, ಸುದರ್ಶನ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ