ಪೋಸ್ಟ್‌ಗಳು

ಜೂನ್, 2026 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಸ್ವಗ್ರಾಮದಲ್ಲಿ ಎಸ್‌ಐಆರ್ ಫಾರಂ ಭರ್ತಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಉಮೇಶ್ ಮೇಟಿ

ಇಮೇಜ್
ಬಾಗಲಕೋಟ ವಿಧಾನಸಭಾ ಕ್ಷೇತ್ರದ ಶಾಸಕ ಅವರು ಇಂದು ತಮ್ಮ ಸ್ವಗ್ರಾಮದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಭಿಯಾನದ ಅಂಗವಾಗಿ ಎಸ್‌ಐಆರ್ ಫಾರಂ ಭರ್ತಿ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿರುವುದನ್ನು ಖಚಿತಪಡಿಸಿಕೊಂಡು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಜನರು ಯಾವುದೇ ಗೊಂದಲಕ್ಕೆ ಒಳಗಾಗದೆ ಅಗತ್ಯ ದಾಖಲೆಗಳೊಂದಿಗೆ ಫಾರಂ ಭರ್ತಿ ಮಾಡಿ ತಮ್ಮ ಮತದಾನದ ಹಕ್ಕನ್ನು ಭದ್ರಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಎಸ್‌ಐಆರ್ ಕುರಿತು ಜನಜಾಗೃತಿ – ಗ್ರಾಮಸ್ಥರ ಅಹವಾಲು ಆಲಿಸಿದ ಶಾಸಕ ಉಮೇಶ್ ಮೇಟಿ

ಇಮೇಜ್
ಬಾಗಲಕೋಟೆ, ಜೂನ್ 29: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ರಾಮತಾಲ, ಹೂವಿನಹಳ್ಳಿ, ಮುಳ್ಳೂರು, ನಿಂಬಲಗುಂದಿ, ಕಳ್ಳಿಗುಡ್ಡ, ಹಿರೇಮಾಗಿ, ಇನಾಂ ಬುದಿಹಾಳ ಹಾಗೂ ಬೆನಾಳ ಗ್ರಾಮಗಳಿಗೆ ಇಂದು ಶಾಸಕ ಉಮೇಶ್ ಎಚ್. ಮೇಟಿ ಭೇಟಿ ನೀಡಿ, ಗ್ರಾಮಸ್ಥರನ್ನು ಭೇಟಿಯಾಗಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿವಿಧ ಗ್ರಾಮಗಳ ಮುಖಂಡರು ಹಾಗೂ ಗ್ರಾಮಸ್ಥರು ಶಾಸಕರಿಗೆ ಶಾಲು ಹೊದಿಸಿ, ಹಾರ ಹಾಕಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು. ಈ ವೇಳೆ ಮಾತನಾಡಿದ ಶಾಸಕ ಉಮೇಶ್ ಎಚ್. ಮೇಟಿ ಅವರು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಕಾರ್ಯಕ್ರಮದ ಮಹತ್ವವನ್ನು ಸಾರ್ವಜನಿಕರಿಗೆ ವಿವರಿಸಿದರು. ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ನಿಖರವಾಗಿ ದಾಖಲಾಗಿರುವುದು ಪ್ರಜಾಪ್ರಭುತ್ವದ ಬಲವರ್ಧನೆಗೆ ಅತ್ಯಂತ ಅವಶ್ಯಕವಾಗಿದ್ದು, ಮತದಾನದ ಹಕ್ಕನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ಕೈಬಿಡುವಿಕೆ ಸೇರಿದಂತೆ ಅಗತ್ಯ ತಿದ್ದುಪಡಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು. ಯಾವುದೇ ಅರ್ಹ ಮತದಾರ ಮತದಾನದ...

ಬಾಗಲಕೋಟ ತಾಲೂಕಿನಲ್ಲಿ 31,304 ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡುವ ಗುರಿ

ಇಮೇಜ್
ತಿಮ್ಮಾಪುರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ಬಾಗಲಕೋಟ , ಜೂನ್ 28: ಬಾಗಲಕೋಟ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ವರ್ಷದ ಅಭಿಯಾನದಡಿ ಬಾಗಲಕೋಟ ತಾಲೂಕಿನ 31,304 ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಗಳನ್ನು ನೀಡುವ ಗುರಿ ಹೊಂದಲಾಗಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಾಗಲಕೋಟ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಎಚ್. ಮೇಟಿ ಅವರು, "ಭಾರತ ಇಂದು ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ, ಆ ಸಾಧನೆಯನ್ನು ಮುಂದುವರಿಸಿಕೊಂಡು ಹೋಗಲು ಪ್ರತಿಯೊಬ್ಬ ಪೋಷಕರ ಸಹಕಾರ ಅತ್ಯಗತ್ಯ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತವಾಗಬಾರದು. ಎಲ್ಲರೂ ಹತ್ತಿರದ ಆರೋಗ್ಯ ಕೇಂದ್ರ, ಅಂಗನವಾಡಿ ಅಥವಾ ಪೋಲಿಯೋ ಬೂತ್‌ಗೆ ಮಕ್ಕಳನ್ನು ಕರೆದುಕೊಂಡು ಬಂದು ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು. ಆರೋಗ್ಯವಂತ ಮಕ್ಕಳೇ ದೇಶದ ಭವಿಷ್ಯವಾಗಿದ್ದಾರೆ" ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಉಮೇಶ್ ಎಚ್. ಮೇಟಿ ವಹಿಸಿದ್ದರು. ಅಶೋಕ್ ನೀಲವಾನಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಸವಂತಪ್ಪ ಮೇಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುನಾಥ ಡಿ.ಎನ್ , ಡಾ. ಶೇಖರಯ್ಯ ಹಿರೇಮಠ್, ಡ...

ಹಿರಿಯ ವಿದ್ಯಾರ್ಥಿಗಳ ಸಂಘದ ಮಾದರಿ ಕಾರ್ಯಕ್ಕೆ ಶಾಸಕ ಉಮೇಶ್ ಮೇಟಿ ಶ್ಲಾಘನೆ

ಇಮೇಜ್
ಆಲೂರು ತಾಂಡಾದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ ವಿತರಣೆ ಬಾಗಲಕೋಟೆ, ಜೂನ್ 28: ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಭದ್ರ ಅಡಿಪಾಯವಾಗಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಜೊತೆಗೆ ಸಮಾಜವೂ ಕೈಜೋಡಿಸಬೇಕು ಎಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಎಚ್. ಮೇಟಿ ಹೇಳಿದರು. ತಾಲೂಕಿನ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಆಲೂರು ತಾಂಡಾದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ, ಆಲೂರು (ಧರ್ಮನಗರ) ವತಿಯಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಶಿಕ್ಷಣ ಸಾಮಗ್ರಿಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಶಾಲೆಯ ಅಭಿವೃದ್ಧಿಗಾಗಿ ಹಳೆಯ ವಿದ್ಯಾರ್ಥಿಗಳು ಒಗ್ಗಟ್ಟಿನಿಂದ ಕೈಗೊಂಡಿರುವ ಈ ಸೇವಾ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ. ಇಂತಹ ಮಾದರಿ ಕಾರ್ಯಗಳು ರಾಜ್ಯದಾದ್ಯಂತ ನಡೆಯಬೇಕು. ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರು ವಿಶ್ವಾಸ ಹೊಂದಬೇಕು. ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಸರ್ಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಸಂಪೂರ್ಣ ಸಹಕಾರ ಮುಂದುವರಿಯಲಿದೆ ಎಂದು ಭರವಸೆ ನೀಡಿದರು. ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಸುರೇಶ್ ಲಮಾಣಿ, ಶಾಲೆಯ ಅಭಿವೃದ್ಧಿ ಹಾಗೂ ದಾಖಲಾತಿ ಹೆಚ್ಚಿಸುವ ಉ...

ತಿಮ್ಮಾಪುರದಲ್ಲಿ ಎಸ್‌ಐಆರ್ ಕುರಿತು ಕಾಂಗ್ರೆಸ್ ಕಾರ್ಯಕರ್ತರ ಸಭೆ

ಇಮೇಜ್
ಬಾಗಲಕೋಟೆ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ತಿಮ್ಮಾಪುರ ಗ್ರಾಮದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಎಚ್. ಮೇಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಎಚ್. ಮೇಟಿ ಅವರು, "ಪ್ರಜಾಪ್ರಭುತ್ವದಲ್ಲಿ ಮತದಾರನೇ ಅತ್ಯಂತ ದೊಡ್ಡ ಶಕ್ತಿ. ಪ್ರತಿಯೊಬ್ಬ ಅರ್ಹ ಮತದಾರನ ಮತ ದೇಶದ ಭವಿಷ್ಯವನ್ನು ರೂಪಿಸುವ ಅಮೂಲ್ಯ ಹಕ್ಕಾಗಿದೆ. ಆದ್ದರಿಂದ ಯಾವುದೇ ಅರ್ಹ ಮತದಾರನ ಹೆಸರೂ ಮತದಾರರ ಪಟ್ಟಿಯಿಂದ ಕೈಬಿಡದಂತೆ ಬೂತ್ ಅಧ್ಯಕ್ಷರು, ಬೂತ್ ಏಜೆಂಟರು ಹಾಗೂ ಪಕ್ಷದ ಕಾರ್ಯಕರ್ತರು ವಿಶೇಷ ಕಾಳಜಿ ವಹಿಸಬೇಕು. ಎಸ್‌ಐಆರ್ ಪ್ರಕ್ರಿಯೆಯನ್ನು ಯಾರೂ ಸಾಮಾನ್ಯ ಕೆಲಸ ಎಂದು ಭಾವಿಸಬಾರದು. ಇದು ಪ್ರತಿಯೊಬ್ಬ ಮತದಾರನ ಹಕ್ಕನ್ನು ಸಂರಕ್ಷಿಸುವ ಅತ್ಯಂತ ಮಹತ್ವದ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲಿಸಬೇಕು. ಹೊಸದಾಗಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ ಅಥವಾ ಕೈಬಿಟ್ಟಿರುವ ಹೆಸರುಗಳಿದ್ದರೆ ಕೂಡಲೇ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಸರಿಪಡಿಸಬೇಕು. ಮತದಾರರಲ್ಲಿ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಿ, ಯಾವುದೇ ಗೊಂದಲ ಉಂಟಾಗದಂತೆ ಮಾರ್ಗದರ್ಶನ ನೀಡ...

7:20 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗಳಿಗೆ ಶಾಸಕ ಉಮೇಶ್ ಮೇಟಿ ಚಾಲನೆ

ಇಮೇಜ್
ಬಾಗಲಕೋಟೆ, ಜೂನ್ 25: ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ (2025–26) ಅಡಿಯಲ್ಲಿ ₹7.20 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಹಾಗೂ ಡಾಂಬರೀಕರಣ ಕಾಮಗಾರಿಗಳಿಗೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಎಚ್. ಮೇಟಿ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಯೋಜನೆಯಡಿ ಕಿರಸೂರ–ಮುಗಳೊಳ್ಳಿ ರಸ್ತೆ, ಮುಚಖಂಡಿ ಕ್ರಾಸ್‌ನಿಂದ ಬಸವೇಶ್ವರ ಸರ್ಕಲ್‌ವರೆಗೆ ರಸ್ತೆ, ಸಿಕ್ಕೇರಿ ಕೆ.ಎಚ್.ಬಿ. ಬಡಾವಣೆಯ ಆಂತರಿಕ ರಸ್ತೆಗಳು, ಕಮಗತಿ ಗ್ರಾಮದ ವಿಠೋಬಾ ದೇವಾಲಯದಿಂದ ರಾಜ್ಯ ಹೆದ್ದಾರಿ-44ಕ್ಕೆ ಸಂಪರ್ಕಿಸುವ ರಸ್ತೆ ಹಾಗೂ ಶಿರೂರ ಸಮೀಪದ ಹೇಮರೆಡ್ಡಿ ಮಲ್ಲಮ್ಮ ದೇವಾಲಯದಿಂದ ರಾಜ್ಯ ಹೆದ್ದಾರಿ-367ಕ್ಕೆ ಸಂಪರ್ಕಿಸುವ ರಸ್ತೆ ಸೇರಿದಂತೆ ಒಟ್ಟು ₹7.20 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸುಗಮ ಸಂಚಾರಕ್ಕೆ ಗುಣಮಟ್ಟದ ರಸ್ತೆ ನಿರ್ಮಾಣ ಅತ್ಯಗತ್ಯವಾಗಿದೆ. ಉತ್ತಮ ರಸ್ತೆ ಸಂಪರ್ಕವು ಪ್ರದೇಶದ ಸಮಗ್ರ ಅಭಿವೃದ್ಧಿಗೆ ನೆರವಾಗಲಿದ್ದು, ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಹೇಳಿದರು. ಜೊತೆಗೆ ಗುತ್ತಿಗೆದಾರರು ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಬಾಗಲ...

ಸಹಕಾರ ಕ್ಷೇತ್ರದ ಬೆಳವಣಿಗೆಗೆ ಅಗತ್ಯ ನೆರವು: ಉಮೇಶ್ ಮೇಟಿ

ಇಮೇಜ್
ಬಾಗಲಕೋಟೆ, ಜೂ.24: ತಾಲೂಕು ಒಕ್ಕುಲತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತ, ಬಾಗಲಕೋಟೆ ಇವರ ವತಿಯಿಂದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಹೆಚ್. ಮೇಟಿ ಅವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಉಮೇಶ್ ಮೇಟಿ ಅವರು, ತಮ್ಮ ತಂದೆ ದಿವಂಗತ ಎಚ್.ವೈ. ಮೇಟಿ ಅವರು ಈ ಸಂಘದ ಮೂಲಕವೇ ರಾಜಕೀಯ ಜೀವನಕ್ಕೆ ಪ್ರವೇಶಿಸಿ, ನಿರ್ದೇಶಕರಾಗಿ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಸಂಘದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದರು. "ನಮ್ಮ ತಂದೆಯವರು ಈ ಸಹಕಾರಿ ಸಂಸ್ಥೆಯ ಬೆಳವಣಿಗೆಗಾಗಿ ಪ್ರಾಮಾಣಿಕವಾಗಿ ದುಡಿದಿದ್ದರು. ಅವರ ಆದರ್ಶಗಳನ್ನು ಮುಂದುವರಿಸಿಕೊಂಡು ನಾನು ಸಹ ಸರ್ಕಾರದ ಸಹಕಾರದೊಂದಿಗೆ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ನೆರವು ಹಾಗೂ ಸೇವೆ ನೀಡಲು ಬದ್ಧನಾಗಿದ್ದೇನೆ" ಎಂದು ಹೇಳಿದರು. ಅವರು ಮುಂದುವರೆದು, 2013ರಲ್ಲಿ ತಮ್ಮ ತಂದೆ ಎಚ್.ವೈ. ಮೇಟಿ ಅವರ ಅಧ್ಯಕ್ಷತೆಯಲ್ಲಿ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿತ್ತು. ಇಂದು ಆ ಕಟ್ಟಡ ಸಂಘದ ಪ್ರಗತಿ ಹಾಗೂ ಅಭಿವೃದ್ಧಿಯ ಪ್ರತೀಕವಾಗಿ ನಿಂತಿರುವುದು ಸಂತಸದ ಸಂಗತಿಯಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವ್ಹಿ.ವೈ. ರಂಗಣ್ಣವರ, ಉಪಾಧ್ಯಕ್ಷ ಎಸ್.ಜಿ. ಹಿರೇಮಠ, ನಿರ್ದೇಶಕರಾದ ಮಂಜುನಾಥ ಬಿಲಕೇರಿ, ಮುತ್ತಪ್ಪ ಹುಗ್ಗಿ,...

ಸಾರಿಗೆ ಸಚಿವ ಬೈರತಿ ಸುರೇಶ್‌ಗೆ ಭೇಟಿ; ಬಾಗಲಕೋಟ ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ

ಇಮೇಜ್
ಬೆಂಗಳೂರು: ಬಾಗಲಕೋಟ ಶಾಸಕ ಉಮೇಶ ಮೇಟಿ ಅವರು ಮಂಗಳವಾರ ಕರ್ನಾಟಕ ಸರ್ಕಾರದ ಸಾರಿಗೆ ಸಚಿವ ಬೈರತಿ ಸುರೇಶ ಅವರನ್ನು ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ, ಬಾಗಲಕೋಟ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಕ್ಷೇತ್ರದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು, ಹೊಸ ಬಸ್ ಸೇವೆಗಳನ್ನು ಆರಂಭಿಸುವುದು ಹಾಗೂ ಜನಸಾಮಾನ್ಯರ ಅನುಕೂಲಕ್ಕೆ ಅಗತ್ಯವಿರುವ ಸಾರಿಗೆ ಸೌಲಭ್ಯಗಳನ್ನು ಒದಗಿಸುವ ಕುರಿತು ಸಚಿವರ ಗಮನ ಸೆಳೆಯಲಾಯಿತು. ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಬೇಡಿಕೆಗಳನ್ನು ಈ ವೇಳೆ ಸಚಿವರಿಗೆ ಸಲ್ಲಿಸಲಾಯಿತು. ಬೇಡಿಕೆಗಳಿಗೆ ಸಚಿವರು ಸ್ಪಂದಿಸಿ, ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ವಿವಿಧ ಪ್ರಸ್ತಾವನೆಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸುಧಾರಣೆ ಸೇರಿದಂತೆ ವಿವಿಧ ವಿಷಯಗಳನ್ನು ಪರಿಶೀಲಿಸಿ, ಇಲಾಖೆಯ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ, ಜನರ ಅನುಕೂಲಕ್ಕೆ ಅಗತ್ಯವಿರುವ ಯೋಜನೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು ಎಂದು ಸಚಿವರು ಹೇಳಿದರು. ಈ ಸಂದರ್ಭದಲ್ಲಿ ಹೊಳೆಬಸು ಶೆಟ್ಟರ್, ದ್ಯಾಮಣ್ಣ ಗಾಳ್ಳಿ, ಶಿದಲಿಂಗಪ್ಪ ಗುಳೇದ, ಅಕ್ಬರ್ ಮುಲ್ಲಾ, ಚಂದು ಕುರಿ, ಯಮನೂರ...

ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಬೃಹತ್ ಪಾದಯಾತ್ರೆ

ಇಮೇಜ್
ಬಾಗಲಕೋಟೆ: ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಬೃಹತ್ ಪಾದಯಾತ್ರೆ ನಡೆಸಿದರು. ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಸಾವಿರಾರು ಬೆಂಬಲಿಗರು ನಗರದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ನಡೆಸಿ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಪಾದಯಾತ್ರೆಯ ವೇಳೆ ಕಾರ್ಯಕರ್ತರು ಪಕ್ಷದ ಪರ ಘೋಷಣೆಗಳನ್ನು ಕೂಗಿ, ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು. ಕೆಲ ಕಾರ್ಯಕರ್ತರು ರಸ್ತೆ ಮೇಲೆ ಉರುಳಾಡಿ ದೀಡ ನಮಸ್ಕಾರ ಹಾಕುವ ಮೂಲಕ ತಮ್ಮ ಮನವಿಯನ್ನು ವ್ಯಕ್ತಪಡಿಸಿದರು. ವಿಜಯಾನಂದ ಕಾಶಪ್ಪನವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಶ್ರಮಿಸಿದ್ದು, ಪಕ್ಷದ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಬೆಂಬಲಿಗರು ಹೇಳಿದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ವಿಜಯಾನಂದ ಕಾಶಪ್ಪನವರು ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸ ಮಾಡಿದ್ದಾರೆ. ಪಕ್ಷ ಸಂಘಟನೆಯನ್ನು ಗಟ್ಟಿಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಕಾರ್ಯಕರ್ತರು ಅಭಿಪ್ರಾಯಪಟ್ಟರು. ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡುವುದರಿಂದ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಪ್ರ...

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸನ್ಮಾನಿಸಿದ ಶಾಸಕ ಉಮೇಶ್ ಮೇಟಿ

ಇಮೇಜ್
ಬೆಂಗಳೂರು, ಜೂನ್ 22: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಹೆಚ್. ಮೇಟಿ ಅವರು ಇಂದು ಬೆಂಗಳೂರಿನಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಖರ್ಗೆ ಅವರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದ ಶಾಸಕ ಉಮೇಶ್ ಮೇಟಿ ಅವರು, ಅವರ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು. ಖರ್ಗೆ ಅವರ ಅನುಭವ, ಸರಳತೆ ಹಾಗೂ ಜನಪರ ನಾಯಕತ್ವವು ಕಾಂಗ್ರೆಸ್ ಕಾರ್ಯಕರ್ತರಿಗೆ ಸದಾ ಪ್ರೇರಣೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ದೇಶದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಖರ್ಗೆ ಅವರು ಪಕ್ಷದ ಬೆಳವಣಿಗೆಗೆ ನೀಡಿರುವ ಕೊಡುಗೆ ಹಾಗೂ ಸಾರ್ವಜನಿಕ ಜೀವನದಲ್ಲಿನ ಅವರ ಸೇವೆ ಅನನ್ಯವಾಗಿದೆ ಎಂದು ಶಾಸಕ ಉಮೇಶ್ ಮೇಟಿ ಪ್ರಶಂಸಿಸಿದರು. ಈ ಸಂದರ್ಭದಲ್ಲಿ ದ್ಯಾಮಣ್ಣ ಗಾಳ್ಳಿ, ಹೊಳೆಬಸು ಶೆಟ್ಟರ್, ಅಜಿಸಾಬ್ ದಂಡಿನ, ಭರತಕುಮಾರ ಹಿಟ್ಟಿ, ಜಟಿಪ್ಪ ಮಾದಾಪುರ, ಅಕ್ಬರ್ ಮುಲ್ಲಾ, ಮಲ್ಲು ಲಮಾಣಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ವಿಧಾನಸೌಧದಲ್ಲಿ ಮತದಾನ; ನೂತನ ಪದಾಧಿಕಾರಿಗಳಿಗೆ ಉಮೇಶ್ ಮೇಟಿ ಅಭಿನಂದನೆ

ಇಮೇಜ್
ವಿಧಾನಪರಿಷತ್ ಚುನಾವಣೆಯಲ್ಲಿ ಮತದಾನ ಮಾಡಿದ ಶಾಸಕ ಉಮೇಶ್ ಎಚ್. ಮೇಟಿ; ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಬೆಂಗಳೂರು: ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಗುರುವಾರ ನಡೆದ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಸದಸ್ಯರ ಆಯ್ಕೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಎಚ್. ಮೇಟಿ ಅವರು ಮತ ಚಲಾಯಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತದಾನ ಮಾಡಿರುವುದು ಸಂತಸ ತಂದಿದೆ ಎಂದು ತಿಳಿಸಿದರು. ಸಂವಿಧಾನದ ಆಶಯಗಳು ಹಾಗೂ ಜನತಾಂತ್ರಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಇಂತಹ ಚುನಾವಣೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ವಿಧಾನಪರಿಷತ್ತಿನ ಹುದ್ದೆಗಳಿಗೆ ಆಯ್ಕೆಯಾಗಿರುವ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ, ಬಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ವಿನಯ ಕಾರ್ತಿಕ್ ಅವರಿಗೆ ಶಾಸಕ ಉಮೇಶ್ ಮೇಟಿ ಅಭಿನಂದನೆ ಸಲ್ಲಿಸಿದರು.

ಬೆಳಗಾವಿಯಲ್ಲಿ ಮಾಜಿ ಸೈನಿಕನ ಸಾವಿನ ಪ್ರಕರಣಕ್ಕೆ ಹೊಸ ತಿರುವು

ಇಮೇಜ್
ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಮಾಜಿ ಸೈನಿಕ ಸಂದೀಪ್ ಅವರ ಸಾವಿನ ಪ್ರಕರಣವು ಮಹತ್ವದ ತಿರುವು ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ, ಆಕೆಯ ಆಪ್ತ ಸ್ನೇಹಿತ ಹಾಗೂ ಕೆಲ ಅಧಿಕಾರಿಗಳು ಸೇರಿದಂತೆ ಒಟ್ಟು 10 ಮಂದಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ಕೆಲವು ತಿಂಗಳ ಹಿಂದೆ ಸಂದೀಪ್ ಅವರು ಅಪಘಾತದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಮೃತಪಟ್ಟಿದ್ದು, ಆರಂಭದಲ್ಲಿ ಇದನ್ನು ಸಹಜ ಸಾವು ಎಂದು ಪರಿಗಣಿಸಲಾಗಿತ್ತು. ಆದರೆ ಮೃತರ ಕುಟುಂಬಸ್ಥರಿಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಳ್ಳಲಾಯಿತು. ತನಿಖೆ ವೇಳೆ ಸಂದೀಪ್ ಅವರ ಪತ್ನಿ ಸುಮಾ ಮಂಜರಗಿ ಹಾಗೂ ಪುಂಡಲೀಕ ಎಂಬ ವ್ಯಕ್ತಿಯ ನಡುವಿನ ಆಪ್ತ ಸಂಬಂಧದ ಬಗ್ಗೆ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಇದೇ ವೇಳೆ ಸಂದೀಪ್ ಅವರ ಸಾವಿನ ಹಿಂದೆ ಸಂಚು ರೂಪಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಪ್ರಕರಣದಲ್ಲಿ ಆಸ್ಪತ್ರೆಯ ಕೆಲ ಸಿಬ್ಬಂದಿ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ಕೆಲ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗಿದ್ದು, ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ವರದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದೇ ವೇಳೆ ಸಂದೀಪ್ ಅವರ ಸಾವಿನ ಬಳಿಕ ವಿಮಾ ಕಂಪನಿಯಿಂದ ಬಿಡುಗಡೆಯಾದ ಕೋಟ್ಯಂತರ ರೂಪಾಯಿ ಮೊತ್ತದ...

ನಾಯನೇಗಲಿಯಲ್ಲಿ ಪಿಕೆಪಿಎಸ್ ಬ್ಯಾಂಕ್ ನೂತನ ಕಚೇರಿ ಉದ್ಘಾಟನೆ

ಇಮೇಜ್
ಬಾಗಲಕೋಟೆ : ತಾಲ್ಲೂಕಿನ ನಾಯನೇಗಲಿ ಗ್ರಾಮದಲ್ಲಿ  ಪಿಕೆಪಿಎಸ್ ಬ್ಯಾಂಕ್‌ನ ನೂತನ ಕಚೇರಿಯನ್ನು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ, ಗ್ರಾಮೀಣ ಪ್ರದೇಶದ ರೈತರ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ . ಪಿಕೆಪಿಎಸ್ ಸಂಸ್ಥೆಯು ರೈತರಿಗೆ ಅಗತ್ಯವಾದ ಸಾಲ ಸೌಲಭ್ಯ, ಕೃಷಿ ಚಟುವಟಿಕೆಗಳಿಗೆ ಬೇಕಾದ ನೆರವು ಹಾಗೂ ವಿವಿಧ ಯೋಜನೆಗಳ ಪ್ರಯೋಜನಗಳನ್ನು ತಲುಪಿಸುವಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸಬೇಕು . ಸಂಘದ ಆಡಳಿತ ಮಂಡಳಿ ಮತ್ತು ಅಧ್ಯಕ್ಷರು ಪಾರದರ್ಶಕ ಆಡಳಿತದ ಮೂಲಕ ಸದಸ್ಯರ ವಿಶ್ವಾಸವನ್ನು ಗಳಿಸಿ, ಸಂಘವನ್ನು ಇನ್ನಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ರೈತರು ಸಂಘದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಬೇಕು. ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಪ್ರತಿಯೊಬ್ಬ ಅರ್ಹ ರೈತನಿಗೂ ತಲುಪುವಂತೆ ಸಂಘವು ಕಾರ್ಯನಿರ್ವಹಿಸಬೇಕು. ಹೊಸ ಕಚೇರಿಯ ನಿರ್ಮಾಣದಿಂದ ಸಂಘದ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ವೇಗ ದೊರೆಯಲಿದ್ದು, ರೈತರಿಗೆ ಉತ್ತಮ ಸೇವೆ ನೀಡಲು ಸಹಕಾರಿಯಾಗಲಿದೆ ಎಂದು ಹೇಳಿದರು. ಬಳಿಕ ನಾಯನೇಗಲಿ ಪಿಕೆಪಿಎಸ್ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಶಾಸಕ ಉಮೇಶ್ ಮೇಟಿ ಅವರನ್ನು ಸನ್ಮ...

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಿದ ಶಾಸಕ ಉಮೇಶ್ ಮೇಟಿ

ಇಮೇಜ್
ಬಾಗಲಕೋಟ : ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವ ಉದ್ದೇಶದಿಂದ ರಾಜ್ಯ ಸರಕಾರ ಜಾರಿಗೆ ತಂದಿರುವ ಉಚಿತ ಬಸ್‌ಪಾಸ್ ಯೋಜನೆಯಡಿ ಶಾಸಕ ಉಮೇಶ ಮೇಟಿ ಅವರು ಸೋಮವಾರ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವಿತರಿಸಿದರು. ಬಾಗಲಕೋಟೆ ಹಳೆ ಬಸ್ ನಿಲ್ದಾಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಹಮ್ಮಿಕೊಂಡ ಉಚಿತ ಬಸ್‌ಪಾಸ್ ವಿತರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಬಸ್ ಪಾಸ್‌ಗಳನ್ನು ವಿತರಿಸಿ ಮಾತನಾಡಿದ ಶಾಸಕರು ಅವರು ವಿದ್ಯಾರ್ಥಿಗಳು ನಮ್ಮ ದೇಶದ ಭವಿಷ್ಯವಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಸಾರಿಗೆ ವೆಚ್ಚ ದೊಡ್ಡ ಸವಾಲಾಗಿದ್ದು, ಉಚಿತ ಬಸ್ ಪಾಸ್ ಯೋಜನೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಶಿಕ್ಷಣವೇ ಸಮಾಜದ ಅಭಿವೃದ್ದಿಗೆ ಅಡಿಪಾಯವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಪೋಷಕರು ಸಹ ತಮ್ಮ ಮಕ್ಕಳ ವಿದ್ಯಾಬ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ರಾಜ್ಯ ಸರಕಾರವು ಶಿಕ್ಷಣ, ಯುವಜನತೆ ಮತ್ತು ಮಹಿಳೆಯರ ಸಬಲೀಕರಣಕ್ಕೆ ವಿಶೇಷ ಆದ್ಯತೆ ನೀಡುತ್ತಿದೆ. ವಿದ್ಯಾರ್ಥಿಗಳ ಕಲಿಕೆಯ ಹಾದಿಯನ್ನು ಸುಗಮಗೊಳಿಸಲು ಇಂತಹ ಯೋಜನೆಗಳು ನಿರಂತರವಾಗಿ ಜಾರಿಯಾಗುತ್ತಿವೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಮಾದರಿಯಾಗಬೇಕು ಎಂದರು...

ರಕ್ತದಾನ ಮಹಾದಾನ: ಶಿಬಿರಕ್ಕೆ ಚಾಲನೆ ನೀಡಿದ ಶಾಸಕ ಉಮೇಶ್ ಮೇಟಿ

ಇಮೇಜ್
ಬಾಗಲಕೋಟ: ನವನಗರದ ಸೆಕ್ಟರ್-26ರಲ್ಲಿ ಖಿದ್ಮಾಟ್ ಈ ಇಸನೀಯಟ್ ಫೌಂಡೇಶನ್ ವತಿಯಿಂದ ಆಯೋಜಿಸಲಾದ ರಕ್ತದಾನ ಶಿಬಿರಕ್ಕೆ ಶಾಸಕ ಉಮೇಶ್ ಮೇಟಿ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ, “ರಕ್ತದಾನವು ಜೀವದಾನಕ್ಕೆ ಸಮಾನವಾಗಿದೆ. ನಮ್ಮಿಂದ ನೀಡುವ ರಕ್ತವು ಅಪಾಯದ ಸಂದರ್ಭದಲ್ಲಿ ಅನೇಕ ಜೀವಗಳನ್ನು ಉಳಿಸಬಲ್ಲದು. ಸಮಾಜದ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರಗಳಲ್ಲಿ ಭಾಗವಹಿಸಿ ಸಮಾಜಕ್ಕೆ ಮಾದರಿಯಾಗಬೇಕು” ಎಂದು ಹೇಳಿದರು. ಬಳಿಕ ಶಾಸಕ ಉಮೇಶ್ ಮೇಟಿ, ಮಲ್ಲಿಕಾರ್ಜುನ ಚರಂತಿಮಠ, ರಜಾಕ ಬೆನ್ನೂರ್ ಹಾಗೂ ಅಕ್ಬರ್ ಮುಲ್ಲಾ ಅವರು ರಕ್ತದಾನ ಮಾಡಿ ಶಿಬಿರದ ಯಶಸ್ಸಿಗೆ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂತೋಷ್ ಹೊಕ್ರಾಣಿ, ಜಾಫರ್ ಬೇಪಾರಿ, ಅನಿಲಕುಮಾರ ದಡ್ಡಿ, ರಾಜು ಮನಿಕೇರಿ ಪಕ್ಷದ ಹಲವಾರು ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ಮಾಜಿ ಸಂಸದ ವಿ.ಎಸ್. ಉಗ್ರಪ್ಪರಿಗೆ ಸನ್ಮಾನ, ಪಕ್ಷ ಸಂಘಟನೆ ಕುರಿತು ಚರ್ಚೆ

ಇಮೇಜ್
ಬಾಗಲಕೋಟೆ: ಬಳ್ಳಾರಿಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಂಸದರಾದ ವಿ.ಎಸ್. ಉಗ್ರಪ್ಪ ಅವರು ಇಂದು ಬಾಗಲಕೋಟೆಯ ಹೊಸ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಗ್ರಪ್ಪ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಬಳಿಕ ಪಕ್ಷದ ಸಂಘಟನೆ ಬಲವರ್ಧನೆ, ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ರಾಜ್ಯದ ಅಭಿವೃದ್ಧಿ ಹಾಗೂ ಜನಪರ ಕಾರ್ಯಕ್ರಮಗಳ ಕುರಿತು ಸಮಾಲೋಚನೆ ನಡೆಸಲಾಯಿತು. ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುವ ಅಗತ್ಯವಿದೆ ಎಂದು ಚರ್ಚೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ಪಕ್ಷದ ಹಲವಾರು ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಿ ತ್ವರಿತ ಪರಿಹಾರ ನೀಡಬೇಕು: ಶಾಸಕ ಉಮೇಶ್ ಮೇಟಿ

ಇಮೇಜ್
ಬಾಗಲಕೋಟೆ: ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ) ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ಹಾಗೂ ಇ-ಖಾತಾ ಉತಾರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಉಮೇಶ್ ಮೇಟಿ, ಸಂತ್ರಸ್ತರ ನೋವಿಗೆ ಸ್ಪಂದಿಸುವ ಕೆಲಸ ಅಧಿಕಾರಿಗಳಿಂದ ಆಗಬೇಕು. ಕಚೇರಿಗೆ ಬರುವ ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸದೇ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಪ್ರಾಧಿಕಾರದಲ್ಲಿ ಉಳಿದಿರುವ ಕೆಲಸಗಳನ್ನು ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಸಂತ್ರಸ್ತರ ದೂರುಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು. ಯುನಿಟ್-1 ಹಾಗೂ ಯುನಿಟ್-2 ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನವೂ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ 15 ಸಂತ್ರಸ್ತರಿಗೆ ಹಕ್ಕುಪತ್ರ ಹಾಗೂ 46 ಫಲಾನುಭವಿಗಳಿಗೆ ಇ-ಖಾತಾ ಉತಾರ ವಿತರಿಸಲಾಯಿತು. ಇದೇ ವೇಳೆ ನವನಗರ ವ್ಯಾಪ್ತಿಯಲ್ಲಿ ನೂತನ ಸುಸಜ್ಜಿತ ಮಾರುಕಟ್ಟೆ ನಿರ್ಮಾಣದ ಕುರಿತು ಪ್ರಸ್ತಾಪಿಸಿದ ಶಾಸಕ ಉಮೇಶ್ ಮೇಟಿ, ಸುಮಾರು 200 ಎಕರೆ ಪ್ರದೇಶದಲ್ಲಿ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಸಚಿವರ ಗಮನಕ್ಕೆ ವಿಷಯ ತರಲಾಗಿದ್ದು, ಯೋಜನೆ ಜಾರಿಗೊಳಿ...

೧೦೫ ಲಕ್ಷ ರೂ. ವೆಚ್ಚದ ಡಾಂಬರೀಕರಣ ಕಾಮಗಾರಿಗೆ ಶಾಸಕ ಉಮೇಶ್ ಮೇಟಿ ಚಾಲನೆ

ಇಮೇಜ್
ಬಾಗಲಕೋಟೆ, ಜೂನ್ 13: ಬಾಗಲಕೋಟೆ ನವನಗರ ಬಸ್ ನಿಲ್ದಾಣದ ಪೂರ್ವ ಹಾಗೂ ದಕ್ಷಿಣ ಭಾಗದ ಆವರಣದಲ್ಲಿ ₹೧೦೫ ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಡಾಂಬರೀಕರಣ ಕಾಮಗಾರಿಗೆ ಬಾಗಲಕೋಟೆ ಮತಕ್ಷೇತ್ರದ ಶಾಸಕ ಉಮೇಶ  ಮೇಟಿ ಉಮೇಶ್ ಮೇಟಿ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ ಅವರು, ಸಾರ್ವಜನಿಕರಿಗೆ ಉತ್ತಮ ಹಾಗೂ ಸುಗಮ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಬಸ್ ನಿಲ್ದಾಣಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಹೇಳಿದರು. ನವನಗರ ಬಸ್ ನಿಲ್ದಾಣಕ್ಕೆ ಪ್ರತಿದಿನ ಸಾವಿರಾರು ಪ್ರಯಾಣಿಕರು ಆಗಮಿಸುತ್ತಿದ್ದು, ಮಳೆಗಾಲದಲ್ಲಿ ಆವರಣದಲ್ಲಿ ನೀರು ನಿಲ್ಲುವುದರಿಂದ ಪ್ರಯಾಣಿಕರು ಮತ್ತು ವಾಹನ ಚಾಲಕರು ತೊಂದರೆ ಅನುಭವಿಸುತ್ತಿದ್ದರು. ಇದೀಗ ₹೧೦೫ ಲಕ್ಷ ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದ ಅವರು, ಸಾರ್ವಜನಿಕರ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ಶಾಶ್ವತ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಈ ಅಭಿವೃದ್ಧಿ ಕಾರ್ಯದಿಂದ ಪ...