ಬಾಗಲಕೋಟ ತಾಲೂಕಿನಲ್ಲಿ 31,304 ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡುವ ಗುರಿ

ತಿಮ್ಮಾಪುರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ಬಾಗಲಕೋಟ, ಜೂನ್ 28: ಬಾಗಲಕೋಟ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ವರ್ಷದ ಅಭಿಯಾನದಡಿ ಬಾಗಲಕೋಟ ತಾಲೂಕಿನ 31,304 ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಗಳನ್ನು ನೀಡುವ ಗುರಿ ಹೊಂದಲಾಗಿದೆ.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಾಗಲಕೋಟ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಎಚ್. ಮೇಟಿ ಅವರು, "ಭಾರತ ಇಂದು ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ, ಆ ಸಾಧನೆಯನ್ನು ಮುಂದುವರಿಸಿಕೊಂಡು ಹೋಗಲು ಪ್ರತಿಯೊಬ್ಬ ಪೋಷಕರ ಸಹಕಾರ ಅತ್ಯಗತ್ಯ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತವಾಗಬಾರದು. ಎಲ್ಲರೂ ಹತ್ತಿರದ ಆರೋಗ್ಯ ಕೇಂದ್ರ, ಅಂಗನವಾಡಿ ಅಥವಾ ಪೋಲಿಯೋ ಬೂತ್‌ಗೆ ಮಕ್ಕಳನ್ನು ಕರೆದುಕೊಂಡು ಬಂದು ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು. ಆರೋಗ್ಯವಂತ ಮಕ್ಕಳೇ ದೇಶದ ಭವಿಷ್ಯವಾಗಿದ್ದಾರೆ" ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಉಮೇಶ್ ಎಚ್. ಮೇಟಿ ವಹಿಸಿದ್ದರು. ಅಶೋಕ್ ನೀಲವಾನಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಸವಂತಪ್ಪ ಮೇಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುನಾಥ ಡಿ.ಎನ್ , ಡಾ. ಶೇಖರಯ್ಯ ಹಿರೇಮಠ್, ಡಾ. ರಾಜಕುಮಾರ ಯಾರಗಲ್, ತಾಲೂಕು ಆರೋಗ್ಯಾಧಿಕಾರಿ ಡಾ. ಸರಸ್ವತಿ ಮಾಗಿ, ಮುತ್ತಪ್ಪ ಹುಗ್ಗಿ, ಮಹಾದೇವಿ ಮೇಟಿ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ