ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಉಮೇಶ್ ಮೇಟಿ

ವಿಜಯಪುರ, ಜೂನ್ 7: ಶಿಕ್ಷಣವು ವ್ಯಕ್ತಿಯ ಬದುಕನ್ನು ರೂಪಿಸುವ ಶಕ್ತಿಯಾಗಿದ್ದು, ಇಂದಿನ ವಿದ್ಯಾರ್ಥಿಗಳೇ ನಾಳಿನ ದೇಶದ ಭವಿಷ್ಯ ನಿರ್ಮಾತೃಗಳು ಎಂದು ಬಾಗಲಕೋಟೆ ಶಾಸಕ ಉಮೇಶ್ ಮೇಟಿ ಹೇಳಿದರು.
ವಿಜಯಪುರ ಜಿಲ್ಲೆಯ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಪುಣ್ಯಶ್ಲೋಕ ಅಹಿಲ್ಯಾದೇವಿ ಹೋಳ್ಕರ್ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ–2026 ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗದೆ ಜ್ಞಾನ, ಸಂಸ್ಕಾರ ಹಾಗೂ ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿಯೂ ಅಪಾರ ಪ್ರತಿಭೆ ಅಡಗಿದೆ. ಸೂಕ್ತ ಅವಕಾಶ ಮತ್ತು ಪ್ರೋತ್ಸಾಹ ದೊರೆತರೆ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬಲ್ಲರು. ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸಿ, ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ ಎಂದು ಉಮೇಶ್ ಮೇಟಿ ಅಭಿಪ್ರಾಯಪಟ್ಟರು 

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಮೂಲಾಧಾರವಾಗಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶಿಸ್ತು ಮತ್ತು ಗುರಿಯೊಂದಿಗೆ ಮುನ್ನಡೆಯಬೇಕು. ಪ್ರತಿಭಾವಂತರನ್ನು ಗುರುತಿಸಿ ಗೌರವಿಸುವ ಇಂತಹ ಕಾರ್ಯಕ್ರಮಗಳು ಯುವಜನರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಸಮಾಜದ ಪ್ರಗತಿಗೆ ಪೂರಕವಾಗುತ್ತವೆ.

ಸಮಾಜದ ಸಂಘಟನೆಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ ಬೆಳವಣಿಗೆಯಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮಕ್ಕೆ ಶ್ರೀ ಶ್ರೀ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯವಿದ್ದು, ಸುಕ್ಷೇತ್ರ ಗೊಳಸಾರದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಅಭಿನವ ಪುಂಡಲಿಂಗ ಮಹಾರಾಜರು ಆಶೀರ್ವಚನ ನೀಡಿದರು. ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರ ಮಡಿವಾಳಪ್ಪ ಕರಡಿ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಲಿ ಸೇರಿದಂತೆ ಹಲವಾರು ಗಣ್ಯರು, ಅಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಪ್ರತಿಭಾವಂತರಿಗೆ ಇದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ವರದಿ :ಅಡಿವೆಪ್ಪ ಸರೂರ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ