ಬಾಗಲಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಎಸ್‌.ಐ.ಆರ್. ಕುರಿತು ತರಬೇತಿ ಕಾರ್ಯಾಗಾರ

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಪಕ್ಷದ ಕಾರ್ಯಕರ್ತರಿಗೆ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್ ಅವರು ಎಸ್‌.ಐ.ಆರ್. ಪ್ರಕ್ರಿಯೆಯ ಉದ್ದೇಶ, ಮತದಾರರ ಪಟ್ಟಿಯ ಪರಿಷ್ಕರಣೆ ವಿಧಾನ ಹಾಗೂ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ವಿವರವಾದ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಮತದಾರರ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಯು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಸಂವಿಧಾನಾತ್ಮಕ ಸಂಸ್ಥೆಗಳ ಸ್ವಾಯತ್ತತೆ ಮತ್ತು ಪಾರದರ್ಶಕತೆ ಕಾಪಾಡಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಅಭಿಪ್ರಾಯಪಟ್ಟರು. ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ಪ್ರಕ್ರಿಯೆ ನ್ಯಾಯಸಮ್ಮತ ಹಾಗೂ ಪಕ್ಷಾತೀತವಾಗಿ ನಡೆಯಬೇಕು ಎಂದು ಅವರು ಒತ್ತಿಹೇಳಿದರು. ಜೊತೆಗೆ ಜನರು ಜಾಗೃತರಾಗಿ ತಮ್ಮ ಮತದಾನದ ಹಕ್ಕುಗಳ ಬಗ್ಗೆ ಅರಿವು ಹೊಂದಿ, ಪ್ರಜಾಪ್ರಭುತ್ವದ ಬಲವರ್ಧನೆಗೆ ಕೈಜೋಡಿಸಬೇಕೆಂದು ಕರೆ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ, ಶಾಸಕ ಉಮೇಶ್ ಹುಲ್ಲಪ್ಪ ಮೇಟಿ, ಕೆಪಿಸಿಸಿ ಉಪಾಧ್ಯಕ್ಷ ಎಂ.ಬಿ. ಸೌದಾಗರ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ್ ಎಸ್. ಹಡ್ಲಿ, ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ