೧೦೫ ಲಕ್ಷ ರೂ. ವೆಚ್ಚದ ಡಾಂಬರೀಕರಣ ಕಾಮಗಾರಿಗೆ ಶಾಸಕ ಉಮೇಶ್ ಮೇಟಿ ಚಾಲನೆ

ಬಾಗಲಕೋಟೆ, ಜೂನ್ 13: ಬಾಗಲಕೋಟೆ ನವನಗರ ಬಸ್ ನಿಲ್ದಾಣದ ಪೂರ್ವ ಹಾಗೂ ದಕ್ಷಿಣ ಭಾಗದ ಆವರಣದಲ್ಲಿ ₹೧೦೫ ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಡಾಂಬರೀಕರಣ ಕಾಮಗಾರಿಗೆ ಬಾಗಲಕೋಟೆ ಮತಕ್ಷೇತ್ರದ ಶಾಸಕ ಉಮೇಶ  ಮೇಟಿ ಉಮೇಶ್ ಮೇಟಿ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ ಅವರು, ಸಾರ್ವಜನಿಕರಿಗೆ ಉತ್ತಮ ಹಾಗೂ ಸುಗಮ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಬಸ್ ನಿಲ್ದಾಣಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಹೇಳಿದರು. ನವನಗರ ಬಸ್ ನಿಲ್ದಾಣಕ್ಕೆ ಪ್ರತಿದಿನ ಸಾವಿರಾರು ಪ್ರಯಾಣಿಕರು ಆಗಮಿಸುತ್ತಿದ್ದು, ಮಳೆಗಾಲದಲ್ಲಿ ಆವರಣದಲ್ಲಿ ನೀರು ನಿಲ್ಲುವುದರಿಂದ ಪ್ರಯಾಣಿಕರು ಮತ್ತು ವಾಹನ ಚಾಲಕರು ತೊಂದರೆ ಅನುಭವಿಸುತ್ತಿದ್ದರು. ಇದೀಗ ₹೧೦೫ ಲಕ್ಷ ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದ ಅವರು, ಸಾರ್ವಜನಿಕರ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ಶಾಶ್ವತ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಈ ಅಭಿವೃದ್ಧಿ ಕಾರ್ಯದಿಂದ ಪ್ರಯಾಣಿಕರಿಗೆ ಸ್ವಚ್ಛ, ಸುರಕ್ಷಿತ ಮತ್ತು ಅನುಕೂಲಕರ ವಾತಾವರಣ ನಿರ್ಮಾಣವಾಗಲಿದ್ದು, ಮಳೆಗಾಲದಲ್ಲಿ ಉಂಟಾಗುವ ನೀರು ನಿಲ್ಲುವ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಮಾತನಾಡಿ, ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಸಾರ್ವಜನಿಕರಿಗೆ ದೀರ್ಘಕಾಲ ಉಪಯೋಗವಾಗುವ ರೀತಿಯಲ್ಲಿ ಕಾಮಗಾರಿ ನಿರ್ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅನೀಕ ದಡ್ಡಿ, ಬುಡಾ ಅಧ್ಯಕ್ಷ ಅಬ್ದುಲರಜಾಕ್ ಬೇನೂರ, ಮಾಜಿ ಸಚಿವ  ಎಸ್.ಆರ್. ಪಾಟೀಲ, ಬಸವಂತಪ್ಪ ಮೇಟಿ, ಎಸ್. ಎನ್. ರಾಂಪುರ,ಮಲ್ಲಣ್ಣ ಚರಂತಿಮಠ, ಸಂತೋಷ ಹೊಕ್ರಾಣಿ ಸೇರಿದಂತೆ ಅನೇಕ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ