ಮಾಜಿ ಸಂಸದ ವಿ.ಎಸ್. ಉಗ್ರಪ್ಪರಿಗೆ ಸನ್ಮಾನ, ಪಕ್ಷ ಸಂಘಟನೆ ಕುರಿತು ಚರ್ಚೆ
ಬಾಗಲಕೋಟೆ: ಬಳ್ಳಾರಿಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಂಸದರಾದ ವಿ.ಎಸ್. ಉಗ್ರಪ್ಪ ಅವರು ಇಂದು ಬಾಗಲಕೋಟೆಯ ಹೊಸ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಗ್ರಪ್ಪ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಬಳಿಕ ಪಕ್ಷದ ಸಂಘಟನೆ ಬಲವರ್ಧನೆ, ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ರಾಜ್ಯದ ಅಭಿವೃದ್ಧಿ ಹಾಗೂ ಜನಪರ ಕಾರ್ಯಕ್ರಮಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುವ ಅಗತ್ಯವಿದೆ ಎಂದು ಚರ್ಚೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಪಕ್ಷದ ಹಲವಾರು ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ