ವಿಧಾನಸೌಧದಲ್ಲಿ ಮತದಾನ; ನೂತನ ಪದಾಧಿಕಾರಿಗಳಿಗೆ ಉಮೇಶ್ ಮೇಟಿ ಅಭಿನಂದನೆ

ವಿಧಾನಪರಿಷತ್ ಚುನಾವಣೆಯಲ್ಲಿ ಮತದಾನ ಮಾಡಿದ ಶಾಸಕ ಉಮೇಶ್ ಎಚ್. ಮೇಟಿ; ನೂತನ ಪದಾಧಿಕಾರಿಗಳಿಗೆ ಅಭಿನಂದನೆ
ಬೆಂಗಳೂರು: ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಗುರುವಾರ ನಡೆದ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಸದಸ್ಯರ ಆಯ್ಕೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಎಚ್. ಮೇಟಿ ಅವರು ಮತ ಚಲಾಯಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತದಾನ ಮಾಡಿರುವುದು ಸಂತಸ ತಂದಿದೆ ಎಂದು ತಿಳಿಸಿದರು. ಸಂವಿಧಾನದ ಆಶಯಗಳು ಹಾಗೂ ಜನತಾಂತ್ರಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಇಂತಹ ಚುನಾವಣೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ವಿಧಾನಪರಿಷತ್ತಿನ ಹುದ್ದೆಗಳಿಗೆ ಆಯ್ಕೆಯಾಗಿರುವ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ, ಬಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ವಿನಯ ಕಾರ್ತಿಕ್ ಅವರಿಗೆ ಶಾಸಕ ಉಮೇಶ್ ಮೇಟಿ ಅಭಿನಂದನೆ ಸಲ್ಲಿಸಿದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ