ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸನ್ಮಾನಿಸಿದ ಶಾಸಕ ಉಮೇಶ್ ಮೇಟಿ

ಬೆಂಗಳೂರು, ಜೂನ್ 22: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಹೆಚ್. ಮೇಟಿ ಅವರು ಇಂದು ಬೆಂಗಳೂರಿನಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಖರ್ಗೆ ಅವರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದ ಶಾಸಕ ಉಮೇಶ್ ಮೇಟಿ ಅವರು, ಅವರ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು. ಖರ್ಗೆ ಅವರ ಅನುಭವ, ಸರಳತೆ ಹಾಗೂ ಜನಪರ ನಾಯಕತ್ವವು ಕಾಂಗ್ರೆಸ್ ಕಾರ್ಯಕರ್ತರಿಗೆ ಸದಾ ಪ್ರೇರಣೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ದೇಶದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಖರ್ಗೆ ಅವರು ಪಕ್ಷದ ಬೆಳವಣಿಗೆಗೆ ನೀಡಿರುವ ಕೊಡುಗೆ ಹಾಗೂ ಸಾರ್ವಜನಿಕ ಜೀವನದಲ್ಲಿನ ಅವರ ಸೇವೆ ಅನನ್ಯವಾಗಿದೆ ಎಂದು ಶಾಸಕ ಉಮೇಶ್ ಮೇಟಿ ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ದ್ಯಾಮಣ್ಣ ಗಾಳ್ಳಿ, ಹೊಳೆಬಸು ಶೆಟ್ಟರ್, ಅಜಿಸಾಬ್ ದಂಡಿನ, ಭರತಕುಮಾರ ಹಿಟ್ಟಿ, ಜಟಿಪ್ಪ ಮಾದಾಪುರ, ಅಕ್ಬರ್ ಮುಲ್ಲಾ, ಮಲ್ಲು ಲಮಾಣಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ