ಸಾರಿಗೆ ಸಚಿವ ಬೈರತಿ ಸುರೇಶ್‌ಗೆ ಭೇಟಿ; ಬಾಗಲಕೋಟ ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ
ಕ್ಷೇತ್ರದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು, ಹೊಸ ಬಸ್ ಸೇವೆಗಳನ್ನು ಆರಂಭಿಸುವುದು ಹಾಗೂ ಜನಸಾಮಾನ್ಯರ ಅನುಕೂಲಕ್ಕೆ ಅಗತ್ಯವಿರುವ ಸಾರಿಗೆ ಸೌಲಭ್ಯಗಳನ್ನು ಒದಗಿಸುವ ಕುರಿತು ಸಚಿವರ ಗಮನ ಸೆಳೆಯಲಾಯಿತು. ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಬೇಡಿಕೆಗಳನ್ನು ಈ ವೇಳೆ ಸಚಿವರಿಗೆ ಸಲ್ಲಿಸಲಾಯಿತು.
ಬೇಡಿಕೆಗಳಿಗೆ ಸಚಿವರು ಸ್ಪಂದಿಸಿ, ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ವಿವಿಧ ಪ್ರಸ್ತಾವನೆಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸುಧಾರಣೆ ಸೇರಿದಂತೆ ವಿವಿಧ ವಿಷಯಗಳನ್ನು ಪರಿಶೀಲಿಸಿ, ಇಲಾಖೆಯ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ, ಜನರ ಅನುಕೂಲಕ್ಕೆ ಅಗತ್ಯವಿರುವ ಯೋಜನೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಹೊಳೆಬಸು ಶೆಟ್ಟರ್, ದ್ಯಾಮಣ್ಣ ಗಾಳ್ಳಿ, ಶಿದಲಿಂಗಪ್ಪ ಗುಳೇದ, ಅಕ್ಬರ್ ಮುಲ್ಲಾ, ಚಂದು ಕುರಿ, ಯಮನೂರ ಬಡಕನ್ನವರ, ರಮೇಶ್ ಮುರಳ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
ವರದಿ :ಅಡಿವೆಪ್ಪ ಸರೂರ
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ