ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಿ ತ್ವರಿತ ಪರಿಹಾರ ನೀಡಬೇಕು: ಶಾಸಕ ಉಮೇಶ್ ಮೇಟಿ

ಬಾಗಲಕೋಟೆ: ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ) ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ಹಾಗೂ ಇ-ಖಾತಾ ಉತಾರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಉಮೇಶ್ ಮೇಟಿ, ಸಂತ್ರಸ್ತರ ನೋವಿಗೆ ಸ್ಪಂದಿಸುವ ಕೆಲಸ ಅಧಿಕಾರಿಗಳಿಂದ ಆಗಬೇಕು. ಕಚೇರಿಗೆ ಬರುವ ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸದೇ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಪ್ರಾಧಿಕಾರದಲ್ಲಿ ಉಳಿದಿರುವ ಕೆಲಸಗಳನ್ನು ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಸಂತ್ರಸ್ತರ ದೂರುಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು. ಯುನಿಟ್-1 ಹಾಗೂ ಯುನಿಟ್-2 ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನವೂ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 15 ಸಂತ್ರಸ್ತರಿಗೆ ಹಕ್ಕುಪತ್ರ ಹಾಗೂ 46 ಫಲಾನುಭವಿಗಳಿಗೆ ಇ-ಖಾತಾ ಉತಾರ ವಿತರಿಸಲಾಯಿತು.

ಇದೇ ವೇಳೆ ನವನಗರ ವ್ಯಾಪ್ತಿಯಲ್ಲಿ ನೂತನ ಸುಸಜ್ಜಿತ ಮಾರುಕಟ್ಟೆ ನಿರ್ಮಾಣದ ಕುರಿತು ಪ್ರಸ್ತಾಪಿಸಿದ ಶಾಸಕ ಉಮೇಶ್ ಮೇಟಿ, ಸುಮಾರು 200 ಎಕರೆ ಪ್ರದೇಶದಲ್ಲಿ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಸಚಿವರ ಗಮನಕ್ಕೆ ವಿಷಯ ತರಲಾಗಿದ್ದು, ಯೋಜನೆ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ