ರಕ್ತದಾನ ಮಹಾದಾನ: ಶಿಬಿರಕ್ಕೆ ಚಾಲನೆ ನೀಡಿದ ಶಾಸಕ ಉಮೇಶ್ ಮೇಟಿ
ಬಾಗಲಕೋಟ: ನವನಗರದ ಸೆಕ್ಟರ್-26ರಲ್ಲಿ ಖಿದ್ಮಾಟ್ ಈ ಇಸನೀಯಟ್ ಫೌಂಡೇಶನ್ ವತಿಯಿಂದ ಆಯೋಜಿಸಲಾದ ರಕ್ತದಾನ ಶಿಬಿರಕ್ಕೆ ಶಾಸಕ ಉಮೇಶ್ ಮೇಟಿ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ, “ರಕ್ತದಾನವು ಜೀವದಾನಕ್ಕೆ ಸಮಾನವಾಗಿದೆ. ನಮ್ಮಿಂದ ನೀಡುವ ರಕ್ತವು ಅಪಾಯದ ಸಂದರ್ಭದಲ್ಲಿ ಅನೇಕ ಜೀವಗಳನ್ನು ಉಳಿಸಬಲ್ಲದು. ಸಮಾಜದ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರಗಳಲ್ಲಿ ಭಾಗವಹಿಸಿ ಸಮಾಜಕ್ಕೆ ಮಾದರಿಯಾಗಬೇಕು” ಎಂದು ಹೇಳಿದರು.
ಬಳಿಕ ಶಾಸಕ ಉಮೇಶ್ ಮೇಟಿ, ಮಲ್ಲಿಕಾರ್ಜುನ ಚರಂತಿಮಠ, ರಜಾಕ ಬೆನ್ನೂರ್ ಹಾಗೂ ಅಕ್ಬರ್ ಮುಲ್ಲಾ ಅವರು ರಕ್ತದಾನ ಮಾಡಿ ಶಿಬಿರದ ಯಶಸ್ಸಿಗೆ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂತೋಷ್ ಹೊಕ್ರಾಣಿ, ಜಾಫರ್ ಬೇಪಾರಿ, ಅನಿಲಕುಮಾರ ದಡ್ಡಿ, ರಾಜು ಮನಿಕೇರಿ ಪಕ್ಷದ ಹಲವಾರು ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ