ಪೋಸ್ಟ್‌ಗಳು

ಜುಲೈ, 2026 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಪತ್ರಕರ್ತರ ಸೇವೆ ಪ್ರಜಾಪ್ರಭುತ್ವದ ಭದ್ರ ಅಡಿಪಾಯ – ಉಮೇಶ್ ಮೇಟಿ

ಇಮೇಜ್
ಬಾಗಲಕೋಟೆ: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಜವಾಬ್ದಾರಿಯುತ ವೃತ್ತಿಯಾಗಿದ್ದು, ಪತ್ರಕರ್ತರು ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಾಗಲಕೋಟೆ ಶಾಸಕ ಉಮೇಶ್ ಮೇಟಿ ಹೇಳಿದರು. ನಗರದ ನೂತನ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಕರ್ತರು ತಮ್ಮ ಕುಟುಂಬಕ್ಕಿಂತ ಸಮಾಜದ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಿ ಹಗಲಿರುಳು ಸೇವೆ ಸಲ್ಲಿಸುತ್ತಾರೆ. ಅಂತಹ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಅವರ ಶೈಕ್ಷಣಿಕ ಬದುಕಿಗೆ ಮತ್ತಷ್ಟು ಪ್ರೇರಣೆ ನೀಡುವ ಶ್ಲಾಘನೀಯ ಕಾರ್ಯ ಎಂದು ಹೇಳಿದರು. ಜಿಲ್ಲೆಯ ಹಿರಿಯ ಪತ್ರಕರ್ತರಾದ ದಿವಂಗತ ರಾಮ ಮನಗೂಳಿ, ದಿವಂಗತ ಶ್ರೀಶೈಲ ಅಂಗಡಿ ಸೇರಿದಂತೆ ಹಿರಿಯರ ಹೆಸರಿನಲ್ಲಿ ಅತ್ಯುತ್ತಮ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಅವರ ಸೇವೆಯನ್ನು ಸ್ಮರಿಸುವ ಜೊತೆಗೆ ಯುವ ಪತ್ರಕರ್ತರಿಗೆ ಸ್ಫೂರ್ತಿ ನೀಡುವ ಕಾರ್ಯವಾಗಿದೆ. ಪತ್ರಿಕೆ ವಿತರಕರ ಸೇವೆಯನ್ನು ಗುರುತಿಸಿ ಗೌರವಿಸುತ್ತಿರುವುದು ಸಹ ಅಭಿನಂದನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಮ್ಮ ತಂದೆ ದಿವಂಗತ ಎಚ್.ವೈ. ಮೇಟ...

ಹೆಣ್ಣುಮಕ್ಕಳ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿ: ಶಾಸಕ ಉಮೇಶ್ ಮೇಟಿ

ಇಮೇಜ್
ಬಾಗಲಕೋಟ :ಮೊಬೈಲ್ ತಂತ್ರಜ್ಞಾನ ಇಂದಿನ ಅಗತ್ಯವಾಗಿದ್ದರೂ, ಅದರ ದುರ್ಬಳಕೆ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆದ್ದರಿಂದ ಮೊಬೈಲ್ ಅನ್ನು ಶಿಕ್ಷಣ ಮತ್ತು ಜ್ಞಾನಾರ್ಜನೆಗೆ ಸೀಮಿತಗೊಳಿಸಿ, ಡಿಜಿಟಲ್ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬಾಗಲಕೋಟ ಶಾಸಕ ಉಮೇಶ್ ಎಚ್. ಮೇಟಿ ಹೇಳಿದರು. ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ "ಮೊಬೈಲ್ ಬಳಕೆಯ ಪರಿಣಾಮಗಳು ಮತ್ತು ಹೆಣ್ಣುಮಕ್ಕಳ ಸುರಕ್ಷತೆ" ಕುರಿತ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಯುವಜನತೆ, ವಿಶೇಷವಾಗಿ ವಿದ್ಯಾರ್ಥಿನಿಯರು, ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯಿಂದ ಬಳಸಬೇಕು. ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿ ಹಂಚಿಕೊಳ್ಳಬಾರದು. ಸೈಬರ್ ಅಪರಾಧಗಳ ಬಗ್ಗೆ ಅರಿವು ಹೊಂದಿ ಎಚ್ಚರಿಕೆಯಿಂದ ನಡೆದುಕೊಂಡರೆ ಮಾತ್ರ ಸುರಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ನಾಗಲಕ್ಷ್ಮಿ ಚೌದರಿ ಮಾತನಾಡಿ, ಹೆಣ್ಣುಮಕ್ಕಳು ಶಿಕ್ಷಣದ ಜೊತೆಗೆ ಆತ್ಮರಕ್ಷಣೆ, ಆರೋಗ್ಯ ಹಾಗೂ ಡಿಜಿಟಲ್ ಜಾಗೃತಿಯ ಅರಿವು ಬೆಳೆಸಿಕೊಳ್ಳುವುದು ಕಾಲದ ಅಗತ್ಯವಾಗಿದೆ. ಆತ್ಮವಿಶ್ವಾಸ ಮತ್ತು ಜಾಗೃತಿಯೇ ಮಹಿಳೆಯರ ನಿಜವಾದ ಶಕ್ತಿಯಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಉನ್ನತ ಗು...

ಮೀನುಗಾರರಿಗೆ ಮೀನು ಸಲಕರಣೆ ಕಿಟ್ ವಿತರಿಸಿದ:ಶಾಸಕ ಉಮೇಶ್ ಮೇಟಿ

ಇಮೇಜ್
ಬಾಗಲಕೋಟೆ: 2025-26ನೇ ಸಾಲಿನ ರಾಜ್ಯ ವಲಯದ ಒಳನಾಡು ಮೀನುಗಾರರಿಗೆ ಮೀನು ಸಲಕರಣೆ ಕಿಟ್ ವಿತರಣೆ ಯೋಜನೆಯಡಿ ಬದಾಮಿ ವಲಯದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಆರು ಫಲಾನುಭವಿಗಳಿಗೆ ಶಾಸಕ ಉಮೇಶ್ ಎಚ್. ಮೇಟಿ ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಮೀನು ಸಲಕರಣೆ ಕಿಟ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮೀನುಗಾರರ ಆರ್ಥಿಕ ಸಬಲೀಕರಣಕ್ಕಾಗಿ ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದ್ದು, ಅರ್ಹ ಫಲಾನುಭವಿಗಳು ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಮೀನುಗಾರರ ಜೀವನಮಟ್ಟ ಸುಧಾರಣೆಗೆ ಅಗತ್ಯ ನೆರವು ಹಾಗೂ ಪ್ರೋತ್ಸಾಹವನ್ನು ನೀಡಲಾಗುತ್ತಿದೆ ಎಂದರು. ಯೋಜನೆಯಡಿ ಬೊಮ್ಮಣಿ ಗ್ರಾಮದ ಕಸ್ತೂರಿ ರಾಮೋಡಗಿ, ಹಿರೇಗುಳಬಾಳ ಗ್ರಾಮದ ಶೇಖರಪ್ಪ ವಾಲಿಕಾರ್, ಹಿರೇಮ್ಯಾಗೇರಿ ಗ್ರಾಮದ ಬಸಪ್ಪ ಮಾದರ, ಕಮತಗಿ ಪಟ್ಟಣದ ಧನಸಿಂಗ್ ರಾಠೋಡ್, ಲಕ್ಷ್ಮೀಬಾಯಿ ರಾಠೋಡ್ ಹಾಗೂ ರಂಗಪ್ಪ ಕವಾಳಿ ಅವರಿಗೆ ಮೀನು ಸಲಕರಣೆ ಕಿಟ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಸವಂತಪ್ಪ ಮೇಟಿ, ದ್ಯಾಮಣ್ಣ ಗಾಳಿ,ಅಶೋಕ್ ಪಟಣ್ಣದ್ , ಬಸುರಾಜ್ಕ ಟಗೇರಿ, ಜಟ್ಟಪ್ಪ ಮಾದಾಪುರ, ಹನುಮಂತ ಗಣಿ, ಹಣಮಂತ ಬಳಗಾರ, ಬಲರಾಮ ಪವಾರ್ ಸೇರಿದಂತೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್...

ಜಮಖಂಡಿಯಲ್ಲಿ ₹40 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಲೋಕಾಯುಕ್ತ ಬಲೆಗೆ

ಇಮೇಜ್
ಬಾಗಲಕೋಟೆ, ಜು. 27: ನಿವೃತ್ತ ನೌಕರರ ಪಿಂಚಣಿ ಹಾಗೂ ನಿವೃತ್ತಿ ಸೌಲಭ್ಯಗಳ ಕಡತ ವಿಲೇವಾರಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಜಮಖಂಡಿ ತಾಲೂಕು ಖಜಾನೆ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ಸೋಮವಾರ ಬಲೆಗೆ ಬೀಳಿಸಿದ್ದಾರೆ. ಬಂಧಿತರನ್ನು ಎಸ್.ಎಸ್. ಬಿರಾದಾರ, ತಾಲೂಕು ಖಜಾನಾಧಿಕಾರಿ ಹಾಗೂ ವಿನಾಯಕ ಹೋನವಾಡ, ಖಜಾನೆ ಇಲಾಖೆಯ ಸಿಬ್ಬಂದಿ ಎಂದು ಗುರುತಿಸಲಾಗಿದೆ.ಜಮಖಂಡಿ ನಿವಾಸಿ ಚೇತನ ತರತರಿ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದರು. ಅವರ ಮಾವನ ನಿವೃತ್ತಿಯ ನಂತರ ದೊರೆಯಬೇಕಾದ ಪಿಂಚಣಿ ಹಾಗೂ ನಿವೃತ್ತಿ ಸೌಲಭ್ಯಗಳನ್ನು ಮಂಜೂರು ಮಾಡಲು ಮೊದಲಿಗೆ ₹70 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ ₹40 ಸಾವಿರಕ್ಕೆ ಒಪ್ಪಂದ ಮಾಡಿಕೊಂಡಿದ್ದರೆಂದು ದೂರಿನಲ್ಲಿ ಆರೋಪಿಸಲಾಗಿದೆ. ಫಿರ್ಯಾದಿದಾರರಿಂದ ₹40 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿಎಸ್ಪಿ ಸುರೇಶರೆಡ್ಡಿ ಎಂ.ಎಸ್. ಅವರ ಮಾರ್ಗದರ್ಶನದಲ್ಲಿ ಪಿಐ ವಿ.ಎನ್. ಕಡಿ, ಪಿಐ ಎಂ.ಬಿ. ಬಿರಾದಾರ, ಪಿಐ ಎನ್.ಆರ್. ಖಿಲಾರೆ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ; ಅನೇಕ ಮುಖಂಡರಿಂದ ಅರ್ಜಿ ಸಲ್ಲಿಕೆ

ಇಮೇಜ್
ಬಾಗಲಕೋಟೆ, ಜು. 25: ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜು ಎಸ್. ಮನ್ನಿಕೇರಿ, ನಾಗರಾಜ್ ಹದ್ಲಿ, ಹಾಜಿಸಾಬ ಅ. ದಂಡಿನ್, ಚಂದ್ರಶೇಖರ ರಾಠೋಡ ಹಾಗೂ ರಮೇಶ್ ಬದ್ಧನೂರ್ ಅವರು ಶನಿವಾರ ಅರ್ಜಿ ಸಲ್ಲಿಸಿದರು. ಎಐಸಿಸಿ ವೀಕ್ಷಕರಾದ ಬಾಲಯ್ಯ ನಾಯಕ ಅವರಿಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿದ ಮುಖಂಡರು, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುವುದು ಹಾಗೂ ಪಕ್ಷದ ಬೆಳವಣಿಗೆಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು. ಇದೇ ವೇಳೆ ಪಕ್ಷದ ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರ ಆಶೀರ್ವಾದ, ಮಾರ್ಗದರ್ಶನ ಮತ್ತು ಬೆಂಬಲವನ್ನು ಕೋರಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಐವರು ಮುಖಂಡರು ಸ್ಪರ್ಧಾಕಾಂಕ್ಷಿಗಳಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅಧ್ಯಕ್ಷರ ಆಯ್ಕೆ ಕುರಿತು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಹೆಚ್ಚಿದೆ.

ಪತ್ರಕರ್ತರ ಸೋಗಿನಲ್ಲಿ ಸುಲಿಗೆ: ನಾಲ್ವರು ಯೂಟ್ಯೂಬರ್‌ಗಳ ಬಂಧನ

ಇಮೇಜ್
ಹುಕ್ಕೇರಿ: ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಜುಲೈ 18ರಂದು ಸಂಜೆ ಕೋಟಭಾಗಿ ಗ್ರಾಮದ ಮಹಿಬೂಬ್ ಬಾಬುಸಾಬ್ ಜಮಾದಾರ್ ಅವರಿಗೆ ಕಾಕತಿ ಮೂಲದ ವ್ಯಕ್ತಿಯೊಬ್ಬ ಗಾಂಜಾ ಚೀಟಗಳನ್ನು ಖರೀದಿಸುವಂತೆ ಒತ್ತಾಯಿಸಿ ಎರಡು ಚೀಟಗಳಿಗೆ ₹1,000 ನೀಡಿದ್ದನು. ಬಳಿಕ ಕಾರಿನಲ್ಲಿ ಬಂದ ನಾಲ್ವರು ಆರೋಪಿಗಳು ತಮ್ಮನ್ನು ಪೊಲೀಸರು ಎಂದು ಪರಿಚಯಿಸಿಕೊಂಡು ದೂರುದಾರರನ್ನು ಸಮೀಪದ ಕಬ್ಬಿನ ಗದ್ದೆಗೆ ಕರೆದೊಯ್ದು, ಗಾಂಜಾ ಮಾರಾಟ ಮಾಡುತ್ತಿರುವುದಾಗಿ ಆರೋಪಿಸಿ ಬೆದರಿಕೆ ಹಾಕಿದ್ದಾರೆ. ದೂರುದಾರರ ಬಳಿಯಿದ್ದ ಗಾಂಜಾ ಪೊಟ್ಟಣಗಳನ್ನು ಬಿಚ್ಚಿಸಿ ಫೋಟೋ ಹಾಗೂ ವಿಡಿಯೊ ಚಿತ್ರೀಕರಿಸಿ, ಅವರನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಹುಕ್ಕೇರಿ ಪೊಲೀಸ್ ಠಾಣೆ ಸಮೀಪಕ್ಕೆ ಕರೆತಂದು, ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಸಿ ₹2 ಲಕ್ಷದಿಂದ ₹3 ಲಕ್ಷದವರೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಅಂತಿಮವಾಗಿ ದೂರುದಾರರಿಂದ ₹60 ಸಾವಿರ ನಗದು ಪಡೆದು, ಚಿತ್ರೀಕರಿಸಿದ ವಿಡಿಯೊವನ್ನು 'ಜಿ.ಡಿ. ಟಿವಿ' ಹೆಸರಿನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 164/2026ರಡಿ ಭಾರತೀಯ ನ್ಯಾ...

ಆಲಮಟ್ಟಿ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ; ನದಿ ತೀರದ ಜನರಿಗೆ ಎಚ್ಚರಿಕೆ

ಇಮೇಜ್
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಇದರ ಪರಿಣಾಮವಾಗಿ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಆರಂಭಿಸಲಾಗಿದೆ. ಈವರೆಗೆ ಜಲವಿದ್ಯುತ್ ಘಟಕದ ಮೂಲಕ ಮಾತ್ರ ನೀರು ಹೊರಹರಿಸಲಾಗುತ್ತಿತ್ತು. ಆದರೆ ಒಳಹರಿವು ಗಣನೀಯವಾಗಿ ಹೆಚ್ಚಿದ ಕಾರಣ ಶುಕ್ರವಾರದಿಂದ ಜಲಾಶಯದ 26 ಗೇಟ್‌ಗಳ ಪೈಕಿ 14 ಗೇಟ್‌ಗಳನ್ನು ತೆರೆಯಲಾಗಿದ್ದು, ಅವುಗಳ ಮೂಲಕ 25 ಸಾವಿರ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ. ಜಲವಿದ್ಯುತ್ ಘಟಕದ ಮೂಲಕ 42,500 ಕ್ಯುಸೆಕ್‌ ನೀರು ಬಿಡುಗಡೆ ಮುಂದುವರಿದಿದ್ದು, ಒಟ್ಟಾರೆ 67,500 ಕ್ಯುಸೆಕ್‌ ನೀರು ಕೃಷ್ಣಾ ನದಿ ಪಾತ್ರಕ್ಕೆ ಹರಿಯುತ್ತಿದೆ. ಆಲಮಟ್ಟಿ ಜಲಾಶಯದ ಗರಿಷ್ಠ ನೀರಿನ ಮಟ್ಟ 519.60 ಮೀಟರ್‌ ಆಗಿದ್ದು, 123.081 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಶುಕ್ರವಾರ ಸಂಜೆ ವೇಳೆಗೆ ಜಲಾಶಯದಲ್ಲಿ 518.62 ಮೀಟರ್‌ ಎತ್ತರಕ್ಕೆ 106.939 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ವೇಗವಾಗಿ ಭರ್ತಿಯಾಗುತ್ತಿದೆ. ನೀರಿನ ಬಿಡುಗಡೆ ಹಿನ್ನೆಲೆಯಲ್ಲಿ ಕೃಷ್ಣಾ ನದಿ ತೀರದ ಗ್ರಾಮಗಳ ನಿವಾಸಿಗಳು, ರೈತರು ಹಾಗೂ ಸಾರ್ವಜನಿಕರು ನದಿ ತೀರಕ್ಕೆ ಅನಗತ್ಯವಾಗಿ ತೆರಳದಂತೆ ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂ...

200 ಎಕರೆ ವಾಣಿಜ್ಯ ಮಾರುಕಟ್ಟೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಮನವಿ

ಇಮೇಜ್
ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ ಉಮೇಶ್ ಮೇಟಿ ಅವರು ಶುಕ್ರವಾರ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಹಾಗೂ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಸಮಗ್ರ ಮನವಿ ಸಲ್ಲಿಸಿದರು. ಮನವಿಯಲ್ಲಿ ಬಾಗಲಕೋಟೆ ನವನಗರ ಯುನಿಟ್–03ರಲ್ಲಿ ಸುಮಾರು 200 ಎಕರೆ ಪ್ರದೇಶದಲ್ಲಿ ಎಲ್ಲ ವ್ಯಾಪಾರಸ್ಥರನ್ನು ಒಂದೇ ಸಂಕೀರ್ಣದಲ್ಲಿ ಒಗ್ಗೂಡಿಸುವ ಆಧುನಿಕ ವಾಣಿಜ್ಯ ಮಾರುಕಟ್ಟೆ ನಿರ್ಮಿಸಲು ವಿಶೇಷ ಸಭೆ ಕರೆಯುವಂತೆ ಕೋರಲಾಗಿದೆ. ಕೃಷ್ಣಾ ನದಿಯ ಮುಳುಗಡೆಯ ನಂತರ ಹಳೆಯ ಬಾಗಲಕೋಟೆಯ ವ್ಯಾಪಾರ ಚಟುವಟಿಕೆಗಳು ವಿವಿಧೆಡೆ ಚದುರಿರುವುದರಿಂದ ನಗರದ ವಾಣಿಜ್ಯ ಚಟುವಟಿಕೆ ಕುಂಠಿತಗೊಂಡಿದ್ದು, ವ್ಯಾಪಾರಸ್ಥರನ್ನು ಒಂದೇ ಸೂರಿನಡಿ ತರಲು ಈ ಯೋಜನೆ ಅಗತ್ಯವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಇದರೊಂದಿಗೆ ಬಾಗಲಕೋಟೆ ಹಳೇನಗರ, ನವನಗರ, ಕಮತಗಿ, ಅಮೀನಗಡ ಹಾಗೂ ಶಿರೂರ ನಗರಗಳಲ್ಲಿ ಸರ್ಕಾರಿ ಪ್ರೌಢ ಶಾಲೆಗಳನ್ನು ಹಾಗೂ ಬಾಗಲಕೋಟೆ ಹಳೇನಗರ, ನವನಗರ, ಅಮೀನಗಡ, ಕಮತಗಿ, ಶಿರೂರ ಮತ್ತು ಬೇವಿನಮಟ್ಟಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸುವಂತೆ ಕೋರಲಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿಮ್ಮಾಪೂರ ಸರ್ಕಾರಿ ಪ್ರೌ...

ಭ್ರಷ್ಟಾಚಾರ ನಿರ್ಮೂಲನೆಗೆ ಜನರ ಸಹಕಾರ ಅತ್ಯಗತ್ಯ : ಉಪ ಲೋಕಾಯುಕ್ತ ಬಿ.ವೀರಪ್ಪ

ಇಮೇಜ್
ಬಾಗಲಕೋಟೆ, ಜುಲೈ 23: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಹಾಗೂ ಪಾರದರ್ಶಕ ಆಡಳಿತ ವ್ಯವಸ್ಥೆ ಬಲಪಡಿಸಲು ಸಾರ್ವಜನಿಕರು ಮತ್ತು ಅಧಿಕಾರಿಗಳು ಸಮಾನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ಹೇಳಿದರು. ನಗರದ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಗುರುವಾರ ಲೋಕಾಯುಕ್ತ ಇಲಾಖೆಯ ವತಿಯಿಂದ ಆಯೋಜಿಸಿದ್ದ ಜಿಲ್ಲೆಯ ವಿವಿಧ ತಾಲೂಕಿನ ಬಾಕಿ ಪ್ರಕರಣಗಳ ವಿಚಾರಣೆ ಮತ್ತು ವಿಲೇವಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ನಿಗದಿತ ಸಮಯದಲ್ಲಿ ಸ್ಪಂದಿಸಬೇಕು. ಅನಗತ್ಯ ವಿಳಂಬ, ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರಕ್ಕೆ ಅವಕಾಶ ನೀಡದೇ ಕಾನೂನುಬದ್ಧವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಜನರಲ್ಲಿ ಆಡಳಿತದ ಮೇಲಿನ ವಿಶ್ವಾಸ ಹೆಚ್ಚುತ್ತದೆ ಎಂದು ತಿಳಿಸಿದರು. ಸರ್ಕಾರಿ ಕಚೇರಿಗಳಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಉತ್ತರದಾಯಿತ್ವವನ್ನು ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿಯ ಕರ್ತವ್ಯವಾಗಿದೆ. ಸರ್ಕಾರಿ ಸೇವೆಗಳಲ್ಲಿ ಯಾವುದೇ ಅಕ್ರಮ ಅಥವಾ ಭ್ರಷ್ಟಾಚಾರ ಕಂಡುಬಂದಲ್ಲಿ ಲೋಕಾಯುಕ್ತ ಸಂಸ್ಥೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಅವರು ಮನವಿ ಮಾಡಿದರು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಯಾವುದೇ ಇಲಾಖೆಯಲ್ಲಿರುವ ಒಬ್ಬ ಭ್ರಷ್ಟ ಅಧ...

ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಪರೀಕ್ಷೆ ಸೌಲಭ್ಯ: ಶಾಸಕ ಉಮೇಶ್ ಮೇಟಿ

ಇಮೇಜ್
ಬಾಗಲಕೋಟೆ : ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಶೀಘ್ರದಲ್ಲೇ ಎಂಆರ್‌ಐ (MRI) ಸ್ಕ್ಯಾನಿಂಗ್ ಕೇಂದ್ರ ಆರಂಭವಾಗಲಿದ್ದು, ಅದರ ಸಿದ್ಧತೆ ಕುರಿತು ಶಾಸಕ ಉಮೇಶ್ ಎಚ್. ಮೇಟಿ ಅವರು  ಮಂಗಳವಾರ ಆಸ್ಪತ್ರೆಯಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ಎಂಆರ್‌ಐ ಸ್ಕ್ಯಾನಿಂಗ್ ಕೇಂದ್ರದ ಸಿದ್ಧತೆ, ಅಗತ್ಯ ಮೂಲಸೌಕರ್ಯ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕೇಂದ್ರ ಆರಂಭವಾದ ಬಳಿಕ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಎಂಆರ್‌ಐ ಪರೀಕ್ಷೆ ಮಾಡಿಸಿಕೊಳ್ಳುವ ಅವಕಾಶ ದೊರೆಯಲಿದ್ದು, ಸಮಯಕ್ಕೆ ಸರಿಯಾಗಿ ನಿಖರ ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆ ಪಡೆಯಲು ಅನುಕೂಲವಾಗಲಿದೆ. ಇದರಿಂದ ಜಿಲ್ಲೆಯ ಸಾವಿರಾರು ಸಾರ್ವಜನಿಕರಿಗೆ ಪ್ರಯೋಜನವಾಗಲಿದೆ ಎಂದು ಶಾಸಕ ಉಮೇಶ್ ಮೇಟಿ ತಿಳಿಸಿದರು. ಈ ಸಂದರ್ಭದಲ್ಲಿ ನಾಗರಾಜ್ ಹದ್ಲಿ, ದ್ಯಾಮಣ್ಣ ಗಾಳಿ, ರಜಾಕ್ ಬೆನ್ನೂರು, ಎಸ್. ಎನ್. ರಾಂಪುರ, ಹಾಜಿಸಾಬ್ ದಂಡಿನ, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಆಲಮಟ್ಟಿ ಜಲಾಶಯಕ್ಕೆ ನೀರಾವರಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

ಇಮೇಜ್
ಆಲಮಟ್ಟಿ: ರಾಜ್ಯದ ನೀರಾವರಿ ಸಚಿವ ಎನ್.ಎಸ್. ರಾಮಲಿಂಗ ರೆಡ್ಡಿ ಅವರು ಸೋಮವಾರ ಆಲಮಟ್ಟಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಾಗಲಕೋಟೆ ಶಾಸಕ ಉಮೇಶ್ ಎಚ್. ಮೇಟಿ ಅವರು ಸಚಿವರನ್ನು ಭೇಟಿ ಮಾಡಿದರು. ಬಳಿಕ ಸಚಿವರು ಶಾಸಕ ಉಮೇಶ್ ಮೇಟಿ ಅವರೊಂದಿಗೆ ಆಲಮಟ್ಟಿ ಜಲಾಶಯಕ್ಕೆ ತೆರಳಿ, ಜಲಾಶಯದಲ್ಲಿನ ನೀರಿನ ಸಂಗ್ರಹ, ನೀರಿನ ಮಟ್ಟ ಹಾಗೂ ನೀರಾವರಿ ವ್ಯವಸ್ಥೆಯನ್ನು ಪರಿಶೀಲಿಸಿದರು. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರಿನ ಲಭ್ಯತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ವೇಳೆ ಆಲೂರು ತಾಂಡಾ ನಿವಾಸಿಗಳ ಪರವಾಗಿ ಶಾಸಕ ಉಮೇಶ್ ಎಚ್. ಮೇಟಿ ಅವರು ಸಚಿವರಿಗೆ ಮನವಿ ಸಲ್ಲಿಸಿದರು. ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಹೆಚ್ಚಾದಾಗ ಆಲೂರು ತಾಂಡಾಕ್ಕೆ ನೀರು ನುಗ್ಗಿ ತಾಂಡಾ ಮುಳುಗಡೆಯಾಗುತ್ತಿರುವುದರಿಂದ ಸಾರ್ವಜನಿಕರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ, ತಾಂಡಾ ನಿವಾಸಿಗಳ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಶಿವಾನಂದ ಪಾಟೀಲ, ನೀರಾವರಿ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಉಪಚುನಾವಣೆಯಲ್ಲಿ ನನ್ನ ಗೆಲುವಿಗೆ ಹೆಚ್. ಎಸ್. ಸೋಂಪುರ ಅವರ ಪರಿಶ್ರಮ ಮಹತ್ವದ್ದಾಗಿತ್ತು: ಶಾಸಕ ಉಮೇಶ್ ಮೇಟಿ

ಇಮೇಜ್
ಗಜೇಂದ್ರಗಡ: ಶ್ರೀ ಹೆಚ್. ಎಸ್. ಸೋಂಪುರ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ "ಸರ್ವಜನಾಂಗದ ಶಾಂತಿಯ ತೋಟ–ಜಾಗೃತಿ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ" ಕಾರ್ಯಕ್ರಮದಲ್ಲಿ ಬಾಗಲಕೋಟೆ ಶಾಸಕ ಉಮೇಶ್ ಎಚ್. ಮೇಟಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನನ್ನ ಪರವಾಗಿ ಮತಕ್ಷೇತ್ರದಾದ್ಯಂತ ಹಗಲಿರುಳು ಶ್ರಮಿಸಿ, ಜನರ ಮನೆಮನೆಗೆ ತೆರಳಿ ನನ್ನ ಗೆಲುವಿಗೆ ಹೆಚ್. ಎಸ್. ಸೋಂಪುರ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಪರಿಶ್ರಮ, ಸಂಘಟನಾ ಸಾಮರ್ಥ್ಯ ಹಾಗೂ ಜನಸೇವೆಯ ಮನೋಭಾವ ಸದಾ ಸ್ಮರಣೀಯವಾಗಿದೆ. ಸಮಾಜದ ಅಭಿವೃದ್ಧಿಗೆ ಇಂತಹ ಕಾರ್ಯಕರ್ತರ ಸೇವೆ ಅನನ್ಯವಾಗಿದೆ" ಎಂದು ಹೇಳಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕರಿಸುವುದು ಸಮಾಜದಲ್ಲಿ ಶಿಕ್ಷಣಕ್ಕೆ ಉತ್ತೇಜನ ನೀಡುವ ಕಾರ್ಯವಾಗಿದೆ. ಜಾತಿ, ಧರ್ಮ ಭೇದವಿಲ್ಲದೆ ಸಾಮರಸ್ಯ, ಸಹೋದರತ್ವ ಮತ್ತು ಶಾಂತಿಯ ಸಂದೇಶ ಸಾರುವ ಇಂತಹ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಿವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಉಮೇಶ್ ಮೇಟಿ ಅವರು ಹೆಚ್. ಎಸ್. ಸೋಂಪುರ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿ, ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಸಮಾಜಸೇವೆಗೆ ಇನ್ನಷ್ಟು ಶಕ್ತಿ ದೊರೆಯಲಿ ಎಂದು ಹಾರೈಸಿದರು. ಕಾರ್ಯಕ್...

ಕುರುಬ ಸಮುದಾಯದ ಹಿತಕ್ಕಾಗಿ ಕೇಂದ್ರ ಸರ್ಕಾರ ಶೀಘ್ರ ತೀರ್ಮಾನ ಕೈಗೊಳ್ಳಲಿ; 600ಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಇಮೇಜ್
ಕುರುಬ ಸಮಾಜಕ್ಕೆ ಎಸ್.ಟಿ. ಮೀಸಲಾತಿ ವಿಸ್ತರಿಸಲು ಕೇಂದ್ರ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿ: ಕಾಗಿನೆಲೆ ಶ್ರೀ ಬಾಗಲಕೋಟೆ : ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್.ಟಿ.) ಮೀಸಲಾತಿ ವಿಸ್ತರಿಸುವ ಕುರಿತು ಕೇಂದ್ರ ಸರ್ಕಾರ ವಿಳಂಬ ಮಾಡಬಾರದು. ರಾಜ್ಯದ ಎಲ್ಲ ಕುರುಬ ಸಮುದಾಯಕ್ಕೂ ಎಸ್.ಟಿ. ಸೌಲಭ್ಯ ಕಲ್ಪಿಸದಿದ್ದರೆ ಕನಕ ಗುರುಪೀಠ ಕಠಿಣ ಹೋರಾಟದ ನಿರ್ಧಾರ ಕೈಗೊಳ್ಳಲಿದೆ ಎಂದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದರು. ನಗರದ ನವನಗರದ ಕಲಾಭವನದಲ್ಲಿ ಜಿಲ್ಲಾ ಹಾಲುಮತ ನೌಕರರ ಸಂಘ (ರಿ.) ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘ (ರಿ.) ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಕುರುಬ ಸಮುದಾಯವು ಹೊಸದಾಗಿ ಮೀಸಲಾತಿ ಕೇಳುತ್ತಿಲ್ಲ. ಈಗಾಗಲೇ ಬೀದರ್, ಕಲಬುರಗಿ, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ಎಸ್.ಟಿ. ಸೌಲಭ್ಯವನ್ನು ಇಡೀ ಕರ್ನಾಟಕದ ಕುರುಬ ಸಮುದಾಯಕ್ಕೂ ವಿಸ್ತರಿಸಬೇಕು. ಕೇಂದ್ರ ಸರ್ಕಾರದ ದಾಖಲೆಗಳಲ್ಲಿ ಇರುವ 'ಕೊಡಗು' ಎಂಬ ನಿರ್ಬಂಧವನ್ನು ತೆರವುಗೊಳಿಸಿದರೆ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಅವರು ಹೇಳಿದರು. ಸಮಾಜದ ಮಕ್ಕಳ ಶೈಕ್ಷಣಿಕ ಹಾಗೂ ಉದ್ಯೋ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮನವಿ

ಇಮೇಜ್
ಬಾಗಲಕೋಟೆ: ಮುಂಗಾರು ಮಳೆ ಕೊರತೆಯಿಂದ ಜಿಲ್ಲೆಯ ಹಲವೆಡೆ ಜನರು ಹಾಗೂ ಜಾನುವಾರುಗಳಿಗೆ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿ ಶಾಸಕ ಉಮೇಶ್ ಹೆಚ್. ಮೇಟಿ ಅವರು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ವಿಜಯಪುರ ಮುಖ್ಯ ಇಂಜಿನಿಯರ್ ಬಸವರಾಜ್ ಡಿ. ಅವರನ್ನು ಭೇಟಿ ಮಾಡಿದರು. ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ಬಾಗಲಕೋಟೆ ತಾಲೂಕಿನ ಹಳ್ಳ–ಕೆರೆಗಳು ಬತ್ತಿದ್ದು, ಅಂತರ್ಜಲ ಮಟ್ಟವೂ ಗಣನೀಯವಾಗಿ ಕುಸಿದಿದೆ. ಇದರಿಂದ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಸುಮಾರು 72 ಟಿಎಂಸಿ ನೀರು ಸಂಗ್ರಹವಿರುವ ಹಿನ್ನೆಲೆಯಲ್ಲಿ, ನೀರಾವರಿ ಸಲಹಾ ಸಮಿತಿ ಸಭೆಯವರೆಗೆ ಕಾಯದೆ ತಿಮ್ಮಾಪುರ ಎತ್ತ ನೀರಾವರಿ ಯೋಜನೆಯ ಬಲದಂಡೆ ಕಾಲುವೆಗೆ ತಕ್ಷಣ ನೀರು ಹರಿಸುವಂತೆ ಅವರು ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಮುಖ್ಯ ಇಂಜಿನಿಯರ್ ಬಸವರಾಜ್ ಡಿ., ನಾಳೆಯಿಂದ ತಿಮ್ಮಾಪುರ ಎತ್ತ ನೀರಾವರಿ ಯೋಜನೆಯ ಬಲದಂಡೆ ಕಾಲುವೆಗೆ ನೀರು ಹರಿಸಲಾಗುವುದು ಎಂದು ಭರವಸೆ ನೀಡಿದರು ಈ ಸಂದರ್ಭದಲ್ಲಿ ಶಿವಾನಂದ ಅಬ್ಜಲ್ಪುರ್, ವೈ. ವೈ. ತಿಮ್ಮಾಪುರ, ಭೀಮನಗೌಡ ಬೂತಲದಿನ್ನಿ ಹಾಗೂ ಲೋಕನಗೌಡ ಪಾಟೀಲ ಉಪಸ್ಥಿತರಿದ್ದರು.

ಕಾರ್ಮಿಕರ ವಲಸೆ ತಪ್ಪಿಸುವುದು ನಮ್ಮ ಆದ್ಯತೆ: ಶಾಸಕ ಮೇಟಿ

ಇಮೇಜ್
ಬಾಗಲಕೋಟ, ಜು. 18: ಬೆಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್ಕು ಮುಳುಗಡೆ ಗ್ರಾಮಗಳ ಕೂಲಿ ಕಾರ್ಮಿಕರು ತಿಮ್ಮಾಪುರ ಗ್ರಾಮದಲ್ಲಿ ಶಾಸಕ ಉಮೇಶ್ ಎಚ್. ಮೇಟಿ ಅವರನ್ನು ಭೇಟಿ ಮಾಡಿ ಉದ್ಯೋಗ ಕಲ್ಪಿಸುವಂತೆ ಮನವಿ ಸಲ್ಲಿಸಿದರು. VB-G RAM G ಯೋಜನೆಯಡಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಉದ್ಯೋಗ ದೊರೆಯುತ್ತಿಲ್ಲ ಎಂದು ಕಾರ್ಮಿಕರು ಅಳಲು ತೋಡಿಕೊಂಡರು. ಅಲ್ಲದೆ, ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿರುವ ಕೆರೆಗಳ ಹೂಳು ತೆಗೆಯುವ ಕಾಮಗಾರಿಗಳನ್ನು ಕೈಗೊಂಡು ಸ್ಥಳೀಯ ಕೂಲಿ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಶಾಸಕ ಉಮೇಶ್ ಎಚ್. ಮೇಟಿ ಮಾತನಾಡಿ, "ಕೂಲಿ ಕಾರ್ಮಿಕರ ವಲಸೆ ತಪ್ಪಿಸುವುದು ನಮ್ಮ ಆದ್ಯತೆಯಾಗಿದೆ. ಯಾವುದೇ ಕುಟುಂಬ ಉದ್ಯೋಗಕ್ಕಾಗಿ ಊರು ಬಿಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ನಿಯಮಾನುಸಾರ ಉದ್ಯೋಗ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು," ಎಂದು ಭರವಸೆ ನೀಡಿದರು.

ಲಂಚದ ಬದಲು ಲೈಂಗಿಕ ಶೋಷಣೆ ಆರೋಪ: 13 ಮಂದಿಗೆ ಎಚ್‌ಐವಿ ಸೋಂಕು ಪತ್ತೆ

ಇಮೇಜ್
ಗೋರಖ್‌ಪುರ, ಉತ್ತರ ಪ್ರದೇಶ: ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುತ್ತಿದ್ದ ವಿಧವೆ ಮಹಿಳೆಯೊಬ್ಬರ ಮೇಲೆ ಲೈಂಗಿಕ ಶೋಷಣೆ ನಡೆಸಲಾಗಿದೆ ಎಂಬ ಗಂಭೀರ ಆರೋಪದ ಪ್ರಕರಣ ಬೆಳಕಿಗೆ ಬಂದಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ವಿಧವಾ ವೇತನ ಮತ್ತು ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದ್ದ ಮಹಿಳೆಯನ್ನು ಕೆಲ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳು ಲೈಂಗಿಕವಾಗಿ ಶೋಷಣೆ ನಡೆಸಿದ್ದಾರೆ ಎನ್ನಲಾಗಿದೆ. ಹಲವು ವರ್ಷಗಳ ಕಾಲ ಈ ಶೋಷಣೆ ನಡೆದಿರುವುದಾಗಿ ವರದಿಯಾಗಿದೆ. 2018ರಲ್ಲಿ ಮಹಿಳೆ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಎಚ್‌ಐವಿ ಸೋಂಕು ಇರುವುದು ದೃಢಪಟ್ಟಿದೆ. ನಂತರ ಆರೋಗ್ಯ ಇಲಾಖೆ ನಡೆಸಿದ ತಪಾಸಣೆಯಲ್ಲಿ, ಮಹಿಳೆಯ ಸಂಪರ್ಕಕ್ಕೆ ಬಂದಿದ್ದ 13 ಮಂದಿಗೂ ಎಚ್‌ಐವಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಸೂಚನೆ: ಈ ವರದಿ ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾದ ಮಾಹಿತಿಯನ್ನು ಆಧರಿಸಿದೆ. ತನಿಖೆ ಹಾಗೂ ನ್ಯಾಯಾಲಯದ ಅಂತಿಮ ತೀರ್ಪಿನ ಆಧಾರದ ಮೇಲೆ ಪ್ರಕರಣದ ಸತ್ಯಾಸತ್ಯತೆ ನಿರ್ಧಾರವಾಗಲಿದೆ.

ಸರ್ಕಾರಿ ಶಾಲೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಉಮೇಶ್ ಮೇಟಿ

ಇಮೇಜ್
ಬಾಗಲಕೋಟ: ನಗರದ ನವನಗರದ ಸೆಕ್ಟರ್-13ರ ಸರಕಾರಿ ಉರ್ದು ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ ನಂ.1ರಲ್ಲಿ ನೂತನವಾಗಿ ಆರಂಭಗೊಂಡ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಶಾಸಕ ಉಮೇಶ್ ಎಚ್. ಮೇಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಉಮೇಶ್ ಮೇಟಿ ಅವರೊಂದಿಗೆ ಎಸ್‌ಡಿಎಂಸಿ ಅಧ್ಯಕ್ಷ ರಫೀಕ್ ಟಕ್ಕಳಕಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ಹಾಗೂ ಶಾಲಾ ಬ್ಯಾಗ್‌ಗಳನ್ನು ವಿತರಿಸಿದರು. ಬಳಿಕ ಮಾತನಾಡಿದ ಶಾಸಕ ಉಮೇಶ್ ಮೇಟಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಮೂಲಸೌಕರ್ಯ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ನಿರಂತರವಾಗಿ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು. ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ, ಸರ್ಕಾರಿ ಶಾಲೆಗಳಲ್ಲಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಭಾರತಿ ದಾಸೋಗ, ಅಕ್ಬರ್ ಮುಲ್ಲಾ, ವೈ.ವೈ. ತಿಮ್ಮಾಪುರ, ಎಚ್.ಎ. ಸೌದಾಗರ, ಎನ್.ಎ. ಕಲಾದಗಿ, ಪಿ.ಬಿ. ಪಾಟೀಲ, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.