ಕುರುಬ ಸಮುದಾಯದ ಹಿತಕ್ಕಾಗಿ ಕೇಂದ್ರ ಸರ್ಕಾರ ಶೀಘ್ರ ತೀರ್ಮಾನ ಕೈಗೊಳ್ಳಲಿ; 600ಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ನಗರದ ನವನಗರದ ಕಲಾಭವನದಲ್ಲಿ ಜಿಲ್ಲಾ ಹಾಲುಮತ ನೌಕರರ ಸಂಘ (ರಿ.) ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘ (ರಿ.) ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
ಕುರುಬ ಸಮುದಾಯವು ಹೊಸದಾಗಿ ಮೀಸಲಾತಿ ಕೇಳುತ್ತಿಲ್ಲ. ಈಗಾಗಲೇ ಬೀದರ್, ಕಲಬುರಗಿ, ಯಾದಗಿರಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ಎಸ್.ಟಿ. ಸೌಲಭ್ಯವನ್ನು ಇಡೀ ಕರ್ನಾಟಕದ ಕುರುಬ ಸಮುದಾಯಕ್ಕೂ ವಿಸ್ತರಿಸಬೇಕು. ಕೇಂದ್ರ ಸರ್ಕಾರದ ದಾಖಲೆಗಳಲ್ಲಿ ಇರುವ 'ಕೊಡಗು' ಎಂಬ ನಿರ್ಬಂಧವನ್ನು ತೆರವುಗೊಳಿಸಿದರೆ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಅವರು ಹೇಳಿದರು.
ಸಮಾಜದ ಮಕ್ಕಳ ಶೈಕ್ಷಣಿಕ ಹಾಗೂ ಉದ್ಯೋಗ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ಅತ್ಯಂತ ಅಗತ್ಯವಾಗಿದೆ. ಎಸ್.ಟಿ. ಸೌಲಭ್ಯ ದೊರೆತರೆ ಕುರುಬ ಸಮುದಾಯದ ಯುವಕರು ಐಎಎಸ್, ಐಪಿಎಸ್, ವೈದ್ಯರು, ಇಂಜಿನಿಯರ್‌ಗಳು ಸೇರಿದಂತೆ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಅವಕಾಶ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟರು.
ಈ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಜನಪ್ರತಿನಿಧಿಗಳ ಬೆಂಬಲವಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾದಾಮಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ, ಶಿಕ್ಷಣವೇ ಸಮಾಜದ ಪ್ರಗತಿಗೆ ಮೂಲಾಧಾರವಾಗಿದ್ದು, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪೋಷಕರು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಮಾತನಾಡಿ, ಕಾಗಿನೆಲೆ ಶ್ರೀಗಳು ಸಮಾಜದ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದೆ ಎಂದರು.
ಶಿರೂರು ಕನಕ ಬ್ರಹ್ಮ ವಿದ್ಯಾಶ್ರಮದ ಚಿನ್ಮಯಾನಂದ ಸ್ವಾಮೀಜಿ ಮಾತನಾಡಿ, ಶಿಕ್ಷಣದ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಗಲಕೋಟೆ ಶಾಸಕ ಉಮೇಶ್ ಹೆಚ್. ಮೇಟಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವಂತೆ ನಮ್ಮ ತಂದೆ ದಿವಂಗತ ಹೆಚ್.ವೈ. ಮೇಟಿ ಅವರು ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದರು. ನವನಗರದಲ್ಲಿ ಕುರುಬ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನ ಒದಗಿಸುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಸಾಮಾಜಿಕ ಜವಾಬ್ದಾರಿಯನ್ನೂ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ 600ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಪಿಎಸ್‌ಸಿ ಮಾಜಿ ಸದಸ್ಯ ಎಚ್.ಡಿ. ಪಾಟೀಲ, ಜಿಲ್ಲಾ ಹಾಲುಮತ ನೌಕರರ ಸಂಘದ ಗೌರವಾಧ್ಯಕ್ಷ ಎನ್.ಬಿ. ಗೊರವರ, ಜಿಲ್ಲಾಧ್ಯಕ್ಷ ಎಸ್.ಎಚ್. ಘಂಟಿ ಸೇರಿದಂತೆ ವಿವಿಧ ತಾಲೂಕುಗಳ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ