ಸರ್ಕಾರಿ ಶಾಲೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಉಮೇಶ್ ಮೇಟಿ

ಬಾಗಲಕೋಟ: ನಗರದ ನವನಗರದ ಸೆಕ್ಟರ್-13ರ ಸರಕಾರಿ ಉರ್ದು ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ ನಂ.1ರಲ್ಲಿ ನೂತನವಾಗಿ ಆರಂಭಗೊಂಡ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಶಾಸಕ ಉಮೇಶ್ ಎಚ್. ಮೇಟಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ಉಮೇಶ್ ಮೇಟಿ ಅವರೊಂದಿಗೆ ಎಸ್‌ಡಿಎಂಸಿ ಅಧ್ಯಕ್ಷ ರಫೀಕ್ ಟಕ್ಕಳಕಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ಹಾಗೂ ಶಾಲಾ ಬ್ಯಾಗ್‌ಗಳನ್ನು ವಿತರಿಸಿದರು.
ಬಳಿಕ ಮಾತನಾಡಿದ ಶಾಸಕ ಉಮೇಶ್ ಮೇಟಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಮೂಲಸೌಕರ್ಯ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ನಿರಂತರವಾಗಿ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು. ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ, ಸರ್ಕಾರಿ ಶಾಲೆಗಳಲ್ಲಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಭಾರತಿ ದಾಸೋಗ, ಅಕ್ಬರ್ ಮುಲ್ಲಾ, ವೈ.ವೈ. ತಿಮ್ಮಾಪುರ, ಎಚ್.ಎ. ಸೌದಾಗರ, ಎನ್.ಎ. ಕಲಾದಗಿ, ಪಿ.ಬಿ. ಪಾಟೀಲ, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ