ಉಪಚುನಾವಣೆಯಲ್ಲಿ ನನ್ನ ಗೆಲುವಿಗೆ ಹೆಚ್. ಎಸ್. ಸೋಂಪುರ ಅವರ ಪರಿಶ್ರಮ ಮಹತ್ವದ್ದಾಗಿತ್ತು: ಶಾಸಕ ಉಮೇಶ್ ಮೇಟಿ

ಗಜೇಂದ್ರಗಡ: ಶ್ರೀ ಹೆಚ್. ಎಸ್. ಸೋಂಪುರ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ "ಸರ್ವಜನಾಂಗದ ಶಾಂತಿಯ ತೋಟ–ಜಾಗೃತಿ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ" ಕಾರ್ಯಕ್ರಮದಲ್ಲಿ ಬಾಗಲಕೋಟೆ ಶಾಸಕ ಉಮೇಶ್ ಎಚ್. ಮೇಟಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನನ್ನ ಪರವಾಗಿ ಮತಕ್ಷೇತ್ರದಾದ್ಯಂತ ಹಗಲಿರುಳು ಶ್ರಮಿಸಿ, ಜನರ ಮನೆಮನೆಗೆ ತೆರಳಿ ನನ್ನ ಗೆಲುವಿಗೆ ಹೆಚ್. ಎಸ್. ಸೋಂಪುರ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಪರಿಶ್ರಮ, ಸಂಘಟನಾ ಸಾಮರ್ಥ್ಯ ಹಾಗೂ ಜನಸೇವೆಯ ಮನೋಭಾವ ಸದಾ ಸ್ಮರಣೀಯವಾಗಿದೆ. ಸಮಾಜದ ಅಭಿವೃದ್ಧಿಗೆ ಇಂತಹ ಕಾರ್ಯಕರ್ತರ ಸೇವೆ ಅನನ್ಯವಾಗಿದೆ" ಎಂದು ಹೇಳಿದರು.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕರಿಸುವುದು ಸಮಾಜದಲ್ಲಿ ಶಿಕ್ಷಣಕ್ಕೆ ಉತ್ತೇಜನ ನೀಡುವ ಕಾರ್ಯವಾಗಿದೆ. ಜಾತಿ, ಧರ್ಮ ಭೇದವಿಲ್ಲದೆ ಸಾಮರಸ್ಯ, ಸಹೋದರತ್ವ ಮತ್ತು ಶಾಂತಿಯ ಸಂದೇಶ ಸಾರುವ ಇಂತಹ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಉಮೇಶ್ ಮೇಟಿ ಅವರು ಹೆಚ್. ಎಸ್. ಸೋಂಪುರ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿ, ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಸಮಾಜಸೇವೆಗೆ ಇನ್ನಷ್ಟು ಶಕ್ತಿ ದೊರೆಯಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಗಜೇಂದ್ರಗಡದ ಶ್ರೀ ಬಸವರಾಜ ದೇವರು, ಹಜರತ್ ಸೈಯದ್ ನಿಜಾಮುದ್ದೀನ್ ಷಾ ಅಶ್ರಫಿ, ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಜಿ. ಎಸ್. ಪಾಟೀಲ, ವಿಧಾನ ಪರಿಷತ್ ಮುಖ್ಯ ಸಚೇತಕರು ಸಲೀಂ ಅಹ್ಮದ್, ಶಾಸಕ ಭೀಮಸೇನ ಚಿಮ್ಮನಕಟ್ಟಿ ಸೇರಿದಂತೆ ವಿವಿಧ ಗಣ್ಯರು, ಜನಪ್ರತಿನಿಧಿಗಳು, ವಿವಿಧ ಸಮಾಜಗಳ ಮುಖಂಡರು, ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ