ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಪರೀಕ್ಷೆ ಸೌಲಭ್ಯ: ಶಾಸಕ ಉಮೇಶ್ ಮೇಟಿ
ಬಾಗಲಕೋಟೆ: ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಶೀಘ್ರದಲ್ಲೇ ಎಂಆರ್‌ಐ (MRI) ಸ್ಕ್ಯಾನಿಂಗ್ ಕೇಂದ್ರ ಆರಂಭವಾಗಲಿದ್ದು, ಅದರ ಸಿದ್ಧತೆ ಕುರಿತು ಶಾಸಕ ಉಮೇಶ್ ಎಚ್. ಮೇಟಿ ಅವರು ಮಂಗಳವಾರ ಆಸ್ಪತ್ರೆಯಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
ಎಂಆರ್‌ಐ ಸ್ಕ್ಯಾನಿಂಗ್ ಕೇಂದ್ರದ ಸಿದ್ಧತೆ, ಅಗತ್ಯ ಮೂಲಸೌಕರ್ಯ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕೇಂದ್ರ ಆರಂಭವಾದ ಬಳಿಕ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಎಂಆರ್‌ಐ ಪರೀಕ್ಷೆ ಮಾಡಿಸಿಕೊಳ್ಳುವ ಅವಕಾಶ ದೊರೆಯಲಿದ್ದು, ಸಮಯಕ್ಕೆ ಸರಿಯಾಗಿ ನಿಖರ ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆ ಪಡೆಯಲು ಅನುಕೂಲವಾಗಲಿದೆ. ಇದರಿಂದ ಜಿಲ್ಲೆಯ ಸಾವಿರಾರು ಸಾರ್ವಜನಿಕರಿಗೆ ಪ್ರಯೋಜನವಾಗಲಿದೆ ಎಂದು ಶಾಸಕ ಉಮೇಶ್ ಮೇಟಿ ತಿಳಿಸಿದರು.
ಈ ಸಂದರ್ಭದಲ್ಲಿ ನಾಗರಾಜ್ ಹದ್ಲಿ, ದ್ಯಾಮಣ್ಣ ಗಾಳಿ, ರಜಾಕ್ ಬೆನ್ನೂರು, ಎಸ್. ಎನ್. ರಾಂಪುರ, ಹಾಜಿಸಾಬ್ ದಂಡಿನ, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ