ಆಲಮಟ್ಟಿ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ; ನದಿ ತೀರದ ಜನರಿಗೆ ಎಚ್ಚರಿಕೆ

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಇದರ ಪರಿಣಾಮವಾಗಿ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಆರಂಭಿಸಲಾಗಿದೆ.
ಈವರೆಗೆ ಜಲವಿದ್ಯುತ್ ಘಟಕದ ಮೂಲಕ ಮಾತ್ರ ನೀರು ಹೊರಹರಿಸಲಾಗುತ್ತಿತ್ತು. ಆದರೆ ಒಳಹರಿವು ಗಣನೀಯವಾಗಿ ಹೆಚ್ಚಿದ ಕಾರಣ ಶುಕ್ರವಾರದಿಂದ ಜಲಾಶಯದ 26 ಗೇಟ್‌ಗಳ ಪೈಕಿ 14 ಗೇಟ್‌ಗಳನ್ನು ತೆರೆಯಲಾಗಿದ್ದು, ಅವುಗಳ ಮೂಲಕ 25 ಸಾವಿರ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ. ಜಲವಿದ್ಯುತ್ ಘಟಕದ ಮೂಲಕ 42,500 ಕ್ಯುಸೆಕ್‌ ನೀರು ಬಿಡುಗಡೆ ಮುಂದುವರಿದಿದ್ದು, ಒಟ್ಟಾರೆ 67,500 ಕ್ಯುಸೆಕ್‌ ನೀರು ಕೃಷ್ಣಾ ನದಿ ಪಾತ್ರಕ್ಕೆ ಹರಿಯುತ್ತಿದೆ.

ಆಲಮಟ್ಟಿ ಜಲಾಶಯದ ಗರಿಷ್ಠ ನೀರಿನ ಮಟ್ಟ 519.60 ಮೀಟರ್‌ ಆಗಿದ್ದು, 123.081 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಶುಕ್ರವಾರ ಸಂಜೆ ವೇಳೆಗೆ ಜಲಾಶಯದಲ್ಲಿ 518.62 ಮೀಟರ್‌ ಎತ್ತರಕ್ಕೆ 106.939 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ವೇಗವಾಗಿ ಭರ್ತಿಯಾಗುತ್ತಿದೆ.

ನೀರಿನ ಬಿಡುಗಡೆ ಹಿನ್ನೆಲೆಯಲ್ಲಿ ಕೃಷ್ಣಾ ನದಿ ತೀರದ ಗ್ರಾಮಗಳ ನಿವಾಸಿಗಳು, ರೈತರು ಹಾಗೂ ಸಾರ್ವಜನಿಕರು ನದಿ ತೀರಕ್ಕೆ ಅನಗತ್ಯವಾಗಿ ತೆರಳದಂತೆ ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ