ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮನವಿ

ಬಾಗಲಕೋಟೆ: ಮುಂಗಾರು ಮಳೆ ಕೊರತೆಯಿಂದ ಜಿಲ್ಲೆಯ ಹಲವೆಡೆ ಜನರು ಹಾಗೂ ಜಾನುವಾರುಗಳಿಗೆ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿ ಶಾಸಕ ಉಮೇಶ್ ಹೆಚ್. ಮೇಟಿ ಅವರು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ವಿಜಯಪುರ ಮುಖ್ಯ ಇಂಜಿನಿಯರ್ ಬಸವರಾಜ್ ಡಿ. ಅವರನ್ನು ಭೇಟಿ ಮಾಡಿದರು.
ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ಬಾಗಲಕೋಟೆ ತಾಲೂಕಿನ ಹಳ್ಳ–ಕೆರೆಗಳು ಬತ್ತಿದ್ದು, ಅಂತರ್ಜಲ ಮಟ್ಟವೂ ಗಣನೀಯವಾಗಿ ಕುಸಿದಿದೆ. ಇದರಿಂದ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಸುಮಾರು 72 ಟಿಎಂಸಿ ನೀರು ಸಂಗ್ರಹವಿರುವ ಹಿನ್ನೆಲೆಯಲ್ಲಿ, ನೀರಾವರಿ ಸಲಹಾ ಸಮಿತಿ ಸಭೆಯವರೆಗೆ ಕಾಯದೆ ತಿಮ್ಮಾಪುರ ಎತ್ತ ನೀರಾವರಿ ಯೋಜನೆಯ ಬಲದಂಡೆ ಕಾಲುವೆಗೆ ತಕ್ಷಣ ನೀರು ಹರಿಸುವಂತೆ ಅವರು ಮನವಿ ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ಮುಖ್ಯ ಇಂಜಿನಿಯರ್ ಬಸವರಾಜ್ ಡಿ., ನಾಳೆಯಿಂದ ತಿಮ್ಮಾಪುರ ಎತ್ತ ನೀರಾವರಿ ಯೋಜನೆಯ ಬಲದಂಡೆ ಕಾಲುವೆಗೆ ನೀರು ಹರಿಸಲಾಗುವುದು ಎಂದು ಭರವಸೆ ನೀಡಿದರು

ಈ ಸಂದರ್ಭದಲ್ಲಿ ಶಿವಾನಂದ ಅಬ್ಜಲ್ಪುರ್, ವೈ. ವೈ. ತಿಮ್ಮಾಪುರ, ಭೀಮನಗೌಡ ಬೂತಲದಿನ್ನಿ ಹಾಗೂ ಲೋಕನಗೌಡ ಪಾಟೀಲ ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ