ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ; ಅನೇಕ ಮುಖಂಡರಿಂದ ಅರ್ಜಿ ಸಲ್ಲಿಕೆ
ಬಾಗಲಕೋಟೆ, ಜು. 25: ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜು ಎಸ್. ಮನ್ನಿಕೇರಿ, ನಾಗರಾಜ್ ಹದ್ಲಿ, ಹಾಜಿಸಾಬ ಅ. ದಂಡಿನ್, ಚಂದ್ರಶೇಖರ ರಾಠೋಡ ಹಾಗೂ ರಮೇಶ್ ಬದ್ಧನೂರ್ ಅವರು ಶನಿವಾರ ಅರ್ಜಿ ಸಲ್ಲಿಸಿದರು.
ಎಐಸಿಸಿ ವೀಕ್ಷಕರಾದ ಬಾಲಯ್ಯ ನಾಯಕ ಅವರಿಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿದ ಮುಖಂಡರು, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುವುದು ಹಾಗೂ ಪಕ್ಷದ ಬೆಳವಣಿಗೆಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು. ಇದೇ ವೇಳೆ ಪಕ್ಷದ ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರ ಆಶೀರ್ವಾದ, ಮಾರ್ಗದರ್ಶನ ಮತ್ತು ಬೆಂಬಲವನ್ನು ಕೋರಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಐವರು ಮುಖಂಡರು ಸ್ಪರ್ಧಾಕಾಂಕ್ಷಿಗಳಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅಧ್ಯಕ್ಷರ ಆಯ್ಕೆ ಕುರಿತು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಹೆಚ್ಚಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ