ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆ ಅಗತ್ಯ: ಶಾಸಕ ಉಮೇಶ್ ಮೇಟಿ
ಬಾಗಲಕೋಟೆ: ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ ಮಹತ್ವದ ಪಾತ್ರವಿದೆ. ಕ್ರೀಡೆಯಿಂದ ಮಕ್ಕಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸಲು ಸಾಧ್ಯ ಎಂದು ಶಾಸಕ ಉಮೇಶ್ ಮೇಟಿ ಹೇಳಿದರು. ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ, ಬಾಗಲಕೋಟೆ ಹಾಗೂ ಅರುಣೋದಯ ಪೂರ್ವ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಕದಾಂಪುರ ಆರ್.ಸಿ. ಇವರ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಬೇಕು. ಗೆಲುವು-ಸೋಲಿಗಿಂತ ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸುವುದು ಮುಖ್ಯ. ಕ್ರೀಡೆಯಲ್ಲಿ ಸಾಧನೆ ಮಾಡುವ ಮಕ್ಕಳಿಗೆ ಸೂಕ್ತ ಪ್ರೋತ್ಸಾಹ ಹಾಗೂ ಅವಕಾಶ ಕಲ್ಪಿಸಬೇಕು. ಕ್ರೀಡೆಯು ಮಕ್ಕಳ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಬೆಳವಣಿಗೆಗೂ ಸಹಕಾರಿಯಾಗಿದೆ. ಶಿಕ್ಷಣದೊಂದಿಗೆ ಕ್ರೀಡೆಗೆ ಆದ್ಯತೆ ನೀಡಿದಾಗ ಮಕ್ಕಳ ಪ್ರತಿಭೆ ಮತ್ತಷ್ಟು ಬೆಳೆಯಲು ಸಾಧ್ಯ. ಇಂದು ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಎಲ್ಲ ಪುಟಾಣಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ವೇದಮ...