80ನೇ ಸ್ವಾತಂತ್ರ್ಯೋತ್ಸವ: ನವನಗರದಲ್ಲಿ ವಿವಿಧ ಕಾರ್ಯಕ್ರಮ

ಬಾಗಲಕೋಟೆ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15ರಂದು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಬೆಳಿಗ್ಗೆ 8.30ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ವಿಜಯಾನಂದ ಕಾಶಪ್ಪನವರ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಲಿದ್ದು, ರಾಷ್ಟ್ರಗೀತೆ, ನಾಡಗೀತೆ, ಪರೇಡ್ ವೀಕ್ಷಣೆ ಹಾಗೂ ಪಥಸಂಚಲನ ನಡೆಯಲಿದೆ.

ನಂತರ ಸಚಿವ ವಿಜಯಾನಂದ ಕಾಶಪ್ಪನವರ ಅವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಉಮೇಶ ಮೇಟಿ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಹಾಗೂ ನವದೆಹಲಿ ರಾಜ್ಯ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

ಸಂಜೆ 5.30ಕ್ಕೆ ನವನಗರದ ಕಲಾಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ನೃತ್ಯರೂಪಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ