80ನೇ ಸ್ವಾತಂತ್ರ್ಯೋತ್ಸವ: ವಿವಿಧೆಡೆ ಧ್ವಜಾರೋಹಣ ನೆರವೇರಿಸಿದ ಶಾಸಕ ಉಮೇಶ್ ಮೇಟಿ
ಬಾಗಲಕೋಟೆ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಸಕ ಉಮೇಶ್ ಮೇಟಿ ಅವರು ನಗರದ ವಿವಿಧೆಡೆ ನಡೆದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಶಿರೂರ ಅಗಸಿಗೆ ತೆರಳಿದ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ನಂತರ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಮೇಶ್ ಮೇಟಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರು ಹಾಗೂ ದೇಶದ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ವೀರ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಸ್ವಾತಂತ್ರ್ಯದ ಮೌಲ್ಯಗಳಾದ ಸಮಾನತೆ, ಸಾಮಾಜಿಕ ನ್ಯಾಯ, ಸೌಹಾರ್ದತೆ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಜನರ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಅವರು ಹೇಳಿದರು. ಶಿಕ್ಷಣ, ಆರೋಗ್ಯ, ರೈತರ ಕಲ್ಯಾಣ, ಮಹಿಳಾ ಸಬಲೀಕರಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಾಡಿನ ಪ್ರಗತಿಗೆ ಕೈಜೋಡಿಸುವ ಸಂಕಲ್ಪ ಮಾಡೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅನಿಲ್ ಕುಮಾರ್ ದಡ್ಡಿ, ದ್ಯಾಮಣ್ಣ ಗಾಳಿ, ರಾಜು ಮನ್ನಿಕೇರಿ, ಚಂದ್ರಶೇಖರ ರಾಠೋಡ, ಹನುಮಂತ ರಾಕುಂಪಿ, ಅಕ್ಬರ ಮುಲ್ಲಾ, ಎಸ್.ಎನ್. ರಾಂಪುರ, ವೈ.ವೈ. ತಿಮ್ಮಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ