ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಸರ್ಕಾರಿ ಗೌರವ ನೀಡಲು ಮನವಿ

ಬಾಗಲಕೋಟೆ: ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ಕರ್ನಾಟಕದ ರಾಜ್ಯ ಘಟಕದ ಆದೇಶದಂತೆ, ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಮಾನ್ಯ ಜಿಲ್ಲಾ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿ ವರ್ಷ ಜನವರಿ 26ರ ಗಣರಾಜ್ಯೋತ್ಸವ ಹಾಗೂ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳ ಸರ್ಕಾರಿ, ಅರೆಸರ್ಕಾರಿ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರವನ್ನು ಇರಿಸಿ, ಸರ್ಕಾರಿ ಗೌರವ ಸಲ್ಲಿಸಲು ಅಗತ್ಯ ಆದೇಶವನ್ನು ಶೀಘ್ರ ಹೊರಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸಂಗೊಳ್ಳಿ ರಾಯಣ್ಣ ಅವರು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ ಕ್ರಾಂತಿಕಾರಿ ಹೋರಾಟಗಾರರಾಗಿದ್ದು, ಅವರ ದೇಶಭಕ್ತಿ, ಸಾಹಸ ಮತ್ತು ತ್ಯಾಗದ ಸಂದೇಶವನ್ನು ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಳ್ಳಬೇಕು ಎಂದು ಸೇನೆಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ಬಾಗಲಕೋಟೆ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಸುರೇಶ ಚಿತ್ತವಾಡಗಿ, ಜಿಲ್ಲಾ ಗೌರವಾಧ್ಯಕ್ಷ ಬಸಪ್ಪ ತೆಲಗಿ, ಜಿಲ್ಲಾ ಕಾರ್ಯಾಧ್ಯಕ್ಷ ಶಿವಕುಮಾರ ಪೂಜಾರಿ ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷ ವಿಶ್ಚಲ ಗೌಡರ ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ