ವಿವಿಧತೆಯಲ್ಲಿ ಏಕತೆ ಸಾರಿದ ಅನ್ನ ಸಂತರ್ಪಣೆ
ಬಾಗಲಕೋಟೆ: ಪ್ರವಾದಿ ಮೊಹಮ್ಮದ್ (ಸ) ಅವರ ಜನ್ಮದಿನದ ಅಂಗವಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಕ್ರೀಡಾ ಹಾಗೂ ಗ್ರಾಮೀಣಾಭಿವೃದ್ಧಿ ಸಂಘ, ನವನಗರ–ಬಾಗಲಕೋಟೆ ವತಿಯಿಂದ ಜಿಲ್ಲಾಸ್ಪತ್ರೆಯ ರೋಗಿಗಳು ಹಾಗೂ ಅವರ ಕುಟುಂಬದವರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ವಿವಿಧ ಸಮುದಾಯಗಳ ಮುಖಂಡರಾದ ಮಲ್ಲಿಕಾರ್ಜುನ ಮೇಟಿ, ಡಾ. ಶೇಖರ ಮಾನೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ ಕೋಣಿ, ನಾಗರಾಜ ಹದ್ಲಿ, ಖಾರಿ ಸಮೀವುಲ್ಲಾ, ಸಲೀಂ ಮೋಮಿನ, ಶ್ರೀಧರ ನೀಲನಾಯಕ ಸೇರಿದಂತೆ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಸೌಹಾರ್ದತೆ, ಸಹೋದರತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಅಗತ್ಯವಿದೆ. ಎಲ್ಲರೂ ಪರಸ್ಪರ ಪ್ರೀತಿ, ಗೌರವ ಹಾಗೂ ಸಹಬಾಳ್ವೆಯಿಂದ ಜೀವನ ನಡೆಸಬೇಕು ಎಂಬ ಸಂದೇಶ ನೀಡಿದರು.
ಸಂಘದ ಪದಾಧಿಕಾರಿಗಳಾದ ಲಖನ ರೋಕಡೆ, ಇಲಿಯಾಸ್ ಮದರಖಂಡಿ, ಜಯಚಂದ್ರ ಪೂಜಾರಿ, ಶ್ರೀಕಾಂತ ನೀಲನಾಯಕ, ಸಂತೋಷ ನೀಲನಾಯಕ, ಬಂದೇನಮಾಜ ಬಾದಾಮಿ, ಜಹೂರಅಬ್ಬಸ್ ಕಲಾಸಿ, ಶಹಿನಶಾ ಡಾಲಾಯತ, ಆರೀಪ ಡಾಲಾಯತ, ಮೌಲಾಸಾಬ ಹೀರೆಮನಿ, ಜಾವೀದ್ ಬೇಪಾರಿ, ಇಸ್ಮಾಯಿಲ್ ನಧಾಪ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಅನ್ನ ಸಂತರ್ಪಣೆಯಲ್ಲಿ ಜಿಲ್ಲಾಸ್ಪತ್ರೆಯ ರೋಗಿಗಳು, ಅವರ ಕುಟುಂಬದವರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ