ವಿಬಿಜಿಆರ್‌ಎಎಂ ಯೋಜನೆಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ಉಮೇಶ್ ಮೇಟಿ

ಬಾಗಲಕೋಟೆ: ವಿಬಿಜಿಆರ್‌ಎಎಂ (VBGRAMG) ಯೋಜನೆಯ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ಆಯೋಜಿಸಿದ್ದ ಮೋಟಾರ್ ಸೈಕಲ್ ಜಾಗೃತಿ ರ‍್ಯಾಲಿಗೆ ನಾಯನೇಗಲಿ ಗ್ರಾಮದಲ್ಲಿ ಶಾಸಕ ಉಮೇಶ್ ಮೇಟಿ ಅವರು ಚಾಲನೆ ನೀಡಿ, ರ‍್ಯಾಲಿಯಲ್ಲಿ ಭಾಗವಹಿಸಿದರು.
ವಿವಿಧ ಗ್ರಾಮಗಳ ಮೂಲಕ ಸಾಗಿದ ರ‍್ಯಾಲಿಯಲ್ಲಿ ಯೋಜನೆಯ ಉದ್ದೇಶ, ಅನುಷ್ಠಾನ ವಿಧಾನ ಹಾಗೂ ಗ್ರಾಮೀಣ ಕುಟುಂಬಗಳಿಗೆ ದೊರೆಯುವ ಉದ್ಯೋಗಾವಕಾಶಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ, ಗ್ರಾಮೀಣ ಭಾಗದ ಅರ್ಹ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ಅವರ ಆರ್ಥಿಕ ಸ್ವಾವಲಂಬನೆಗೆ ನೆರವಾಗುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಯೋಜನೆಯ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಸ್ಥಳೀಯ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಗ್ರಾಮಸ್ಥರು ಯೋಜನೆಯ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡು, ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಜಾಗೃತಿ ಕಾರ್ಯಕ್ರಮದ ಅಂಗವಾಗಿ ವಿವಿಧ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಜಾಬ್ ಕಾರ್ಡ್‌ಗಳನ್ನು ವಿತರಿಸಲಾಯಿತು. ಯೋಜನೆಯಡಿ ದೊರೆಯುವ ಉದ್ಯೋಗಾವಕಾಶಗಳು ಹಾಗೂ ಸೌಲಭ್ಯಗಳ ಕುರಿತು ಫಲಾನುಭವಿಗಳಿಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಬಸವಂತಪ್ಪ ಮೇಟಿ, ಜಟ್ಟೆಪ್ಪ ಮಾದಾಪೂರ, ಹಣಮಂತ ಬಳೆಗಾರ, ಹಣಮಂತ ಪೂಜಾರಿ, ಸಿದ್ದಪ್ಪ ಮೇಟಿ, ಚನ್ನಪ್ಪ ಉಪಾರ ಸೇರಿದಂತೆ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ