ಬಿಲ್ ಕೆರೂರ ಗ್ರಾಮದಲ್ಲಿ ₹20 ಲಕ್ಷ ವೆಚ್ಚದ ಸಮುದಾಯ ಭವನಕ್ಕೆ ಭೂಮಿಪೂಜೆ; ನೂತನ ಪಶು ಚಿಕಿತ್ಸಾಲಯ ಉದ್ಘಾಟನೆ

ಬಾಗಲಕೋಟೆ: 2025–26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಲ್ ಕೆರೂರ ಗ್ರಾಮದಲ್ಲಿ ₹20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಾರ್ವಜನಿಕ ಸಮುದಾಯ ಭವನಕ್ಕೆ ಶಾಸಕ ಉಮೇಶ್ ಮೇಟಿ ಅವರು ಭೂಮಿಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ನೂತನ ಪಶು ಚಿಕಿತ್ಸಾಲಯವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ, ಗ್ರಾಮಗಳ ಅಭಿವೃದ್ಧಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ಜನರ ಅಗತ್ಯಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಾಗುವುದು. ಬಿಲ್ ಕೆರೂರ ಗ್ರಾಮದ ಸಮಗ್ರ ಅಭಿವೃದ್ಧಿಗೆ ಸದಾ ಬದ್ಧರಾಗಿದ್ದೇವೆ ಎಂದು ಹೇಳಿದರು.
ನೂತನ ಪಶು ಚಿಕಿತ್ಸಾಲಯದಿಂದ ಗ್ರಾಮ ಹಾಗೂ ಸುತ್ತಮುತ್ತಲಿನ ರೈತರು ಮತ್ತು ಪಶುಪಾಲಕರಿಗೆ ಜಾನುವಾರುಗಳ ಚಿಕಿತ್ಸೆ, ಆರೋಗ್ಯ ತಪಾಸಣೆ, ಲಸಿಕೆ, ಕೃತಕ ಗರ್ಭಧಾರಣೆ ಸೇರಿದಂತೆ ವಿವಿಧ ಪಶುವೈದ್ಯಕೀಯ ಸೇವೆಗಳು ಸ್ಥಳೀಯವಾಗಿಯೇ ದೊರೆಯಲಿವೆ. ಕುರಿ ಮತ್ತು ಮೇಕೆ ಸೇರಿದಂತೆ ಜಾನುವಾರುಗಳಿಗೆ ಬರುವ ವಿವಿಧ ರೋಗಗಳ ನಿಯಂತ್ರಣಕ್ಕೆ ಅಗತ್ಯ ಔಷಧೋಪಚಾರ ಹಾಗೂ ಜಂತುನಾಶಕ ಔಷಧಿಗಳನ್ನು ಇಲಾಖೆಯ ಮೂಲಕ ಒದಗಿಸಲಾಗುವುದು. ತುರ್ತು ಸಂದರ್ಭದಲ್ಲಿ 1962ಕ್ಕೆ ಕರೆ ಮಾಡಿದರೆ ಸಂಚಾರಿ ಪಶುವೈದ್ಯಕೀಯ ಸೇವೆ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸವಂತಪ್ಪ ಮೇಟಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಎಸ್.ಎಚ್. ಕರಡಿಗೌಡ, ಎಂ.ಬಿ. ಶಂಕರಗೌಡ್ರು, ಎಸ್.ಎಂ. ರೇವಡಿ, ನಿಂಗಣ್ಣ ಕೋಟಿ, ರಮೇಶ್ ಕೊಳಾರ, ಜಟ್ಟಪ್ಪ ಮಾದಾಪುರ, ರಮೇಶ್ ಮಲೀಗೆರಿ ಸೇರಿದಂತೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ