ಮುಗಳೊಳ್ಳಿ ತಾಂಡಾ ಶಾಲೆಯಲ್ಲಿ ಮೇಲ್ಚಾವಣಿ ಕುಸಿತ: ಗಾಯಗೊಂಡ ಮಕ್ಕಳಿಗೆ ಶಾಸಕ ಮೇಟಿ ಭೇಟಿ

ಬಾಗಲಕೋಟೆ: ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ಬುಧವಾರ ತರಗತಿ ನಡೆಯುತ್ತಿದ್ದ ವೇಳೆ ಮೇಲ್ಚಾವಣಿಯ ಕಾಂಕ್ರೀಟ್ ತುಂಡು ಬಿದ್ದು ಗಾಯಗೊಂಡ ಮಕ್ಕಳನ್ನು ಶಾಸಕ ಉಮೇಶ್ ಮೇಟಿ ಅವರು ಗುರುವಾರ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
‘ಘಟನೆ ನಡೆದ ದಿನವೇ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗೆ ದೂರವಾಣಿ ಮೂಲಕ ಕರೆ ಮಾಡಿ ಘಟನೆಯ ಮಾಹಿತಿ ಪಡೆದುಕೊಂಡಿದ್ದೆ. ನಾನೇ ಕರೆ ಮಾಡಿ ಶಾಲೆಗೆ ಅಂಬುಲೆನ್ಸ್ ಕಳುಹಿಸಿ, ಗಾಯಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿಸಿದ್ದೆ. ಕಮಿಟಿ ಸಭೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳಬೇಕಿದ್ದ ಕಾರಣ ಅಂದು ಆಸ್ಪತ್ರೆಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಇಂದು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದೇನೆ’ ಎಂದು ಮೇಟಿ ತಿಳಿಸಿದರು.
ಮಕ್ಕಳ ಪೋಷಕರಿಂದ ಘಟನೆಯ ಮಾಹಿತಿ ಪಡೆದುಕೊಂಡ ಅವರು, ಗಾಯಗೊಂಡ ಮಕ್ಕಳಿಗೆ ಅಗತ್ಯ ಚಿಕಿತ್ಸೆ ಹಾಗೂ ಸೂಕ್ತ ಆರೈಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಲೆಯ ಮೇಲ್ಚಾವಣಿ ಹಾಗೂ ಕಟ್ಟಡದ ದುರಸ್ತಿ ಕಾಮಗಾರಿಯನ್ನು ತಕ್ಷಣ ಕೈಗೊಂಡು, ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಲಾಗುವುದು. ಘಟನೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮೇಟಿ ಹೇಳಿದರು.

ಈ ಸಂದರ್ಭದಲ್ಲಿ ಬಸವಂತಪ್ಪ ಮೇಟಿ, ನಾಗರಾಜ್ ಹದ್ಲಿ, ಎಸ್.ಎನ್. ರಾಂಪುರ, ದ್ಯಾಮಣ್ಣ ಗಾಳಿ ಹಾಗೂ ರಜಕ್ ಬೇಲೂರ್ ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ