ರಾಜು ದಾಸರ್ ವರ್ಗಾವಣೆ ತಡೆಗೆ ಶಾಸಕ ಉಮೇಶ್ ಮೇಟಿಗೆ ಮನವಿ
ಬಾಗಲಕೋಟೆ: ಜಿಲ್ಲಾ ಕ್ರೀಡಾಂಗಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ದೈಹಿಕ ತರಬೇತಿ ನೀಡುತ್ತಿರುವ ಡಿಎಆರ್ ಪೊಲೀಸ್ ಸಿಬ್ಬಂದಿ ರಾಜು ದಾಸರ್ ಅವರನ್ನು ಬೇರೆ ಕರ್ತವ್ಯಕ್ಕೆ ನಿಯೋಜಿಸದಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಉಮೇಶ್ ಮೇಟಿ ಅವರಿಗೆ ಮನವಿ ಸಲ್ಲಿಸಿದರು.
ರಾಜು ದಾಸರ್ ಅವರಿಂದ ತರಬೇತಿ ಪಡೆದ ನೂರಾರು ವಿದ್ಯಾರ್ಥಿಗಳು ಈಗಾಗಲೇ ಪೊಲೀಸ್, ಸೇನೆ ಸೇರಿದಂತೆ ವಿವಿಧ ಇಲಾಖೆಗಳ ನೇಮಕಾತಿಯ ದೈಹಿಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಿ ಉದ್ಯೋಗ ಪಡೆದಿದ್ದಾರೆ. ಇದರಿಂದ ಪ್ರೇರಣೆಗೊಂಡ ಹಲವು ಬಡ ವಿದ್ಯಾರ್ಥಿಗಳು ಪ್ರಸ್ತುತ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ.
ಯಾವುದೇ ಶುಲ್ಕ ಪಡೆಯದೆ ಉಚಿತವಾಗಿ ದೈಹಿಕ ತರಬೇತಿ ನೀಡುತ್ತಿರುವ ರಾಜು ದಾಸರ್ ಅವರನ್ನು ಬೇರೆ ಕರ್ತವ್ಯಕ್ಕೆ ನಿಯೋಜಿಸಿದರೆ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಅವರನ್ನು ಜಿಲ್ಲಾ ಕ್ರೀಡಾಂಗಣದಲ್ಲಿಯೇ ಮುಂದುವರಿಸಿ, ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಪಡೆಯಲು ಅವಕಾಶ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಶಾಸಕ ಉಮೇಶ್ ಮೇಟಿ ಅವರಿಗೆ ಮನವಿ ಮಾಡಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ