ಗ್ರಾಮೀಣ ಸಂಪರ್ಕ ರಸ್ತೆ ಅಭಿವೃದ್ಧಿಗೆ ಆದ್ಯತೆ: ₹1 ಕೋಟಿ ಕಾಮಗಾರಿಗೆ ಚಾಲನೆ

ಬಾಗಲಕೋಟೆ: ಬೇವಿನಮಟ್ಟಿ ಕ್ರಾಸ್‌ನಿಂದ ಹೊನ್ನಾಕಟ್ಟಿ ಹಾಗೂ ಕಿರಸೂರ ಸಂಪರ್ಕಿಸುವ ರಸ್ತೆಯ ಕಿ.ಮೀ. 1.72ರಿಂದ 10.64ರವರೆಗೆ ₹1 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಉಮೇಶ್ ಮೇಟಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ, ಈ ರಸ್ತೆ ಗ್ರಾಮಸ್ಥರು ಹಾಗೂ ರೈತರಿಗೆ ಪ್ರಮುಖ ಸಂಪರ್ಕ ಮಾರ್ಗವಾಗಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಹೇಳಿದರು. ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಬಾಗಲಕೋಟೆ ಉಪ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ, ದ್ಯಾಮಣ್ಣ ಗಾಳಿ, ಮುತ್ತಣ್ಣ ಮುಳೂರ, ಗೋವಿಂದಪ್ಪ ಗೌಡ್ರು, ಶ್ರೀಕರ್ ದೇಸಾಯಿ , ವೈ. ವೈ. ತಿಮ್ಮಾಪುರ, ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಾಗಲಕೋಟೆ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ಡಿ.ಬಿ. ಸಿದ್ದಾಪುರರನ್ನು ವಿಮುಕ್ತಿಗೊಳಿಸಿ ಆದೇಶ

ಬಾಗಲಕೋಟೆಯಲ್ಲಿ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭೇಟಿ – ಮಲ್ಲಿಕಾರ್ಜುನ ಚರಂತಿಮಠ ಮನೆಗೆ ಆಗಮನ ರಾಜಕೀಯ ಚರ್ಚೆಗೆ ಕಾರಣ