೧೦೫ ಲಕ್ಷ ರೂ. ವೆಚ್ಚದ ಡಾಂಬರೀಕರಣ ಕಾಮಗಾರಿಗೆ ಶಾಸಕ ಉಮೇಶ್ ಮೇಟಿ ಚಾಲನೆ
ಬಾಗಲಕೋಟೆ, ಜೂನ್ 13: ಬಾಗಲಕೋಟೆ ನವನಗರ ಬಸ್ ನಿಲ್ದಾಣದ ಪೂರ್ವ ಹಾಗೂ ದಕ್ಷಿಣ ಭಾಗದ ಆವರಣದಲ್ಲಿ ₹೧೦೫ ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಡಾಂಬರೀಕರಣ ಕಾಮಗಾರಿಗೆ ಬಾಗಲಕೋಟೆ ಮತಕ್ಷೇತ್ರದ ಶಾಸಕ ಉಮೇಶ ಮೇಟಿ ಉಮೇಶ್ ಮೇಟಿ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ ಅವರು, ಸಾರ್ವಜನಿಕರಿಗೆ ಉತ್ತಮ ಹಾಗೂ ಸುಗಮ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಬಸ್ ನಿಲ್ದಾಣಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಹೇಳಿದರು. ನವನಗರ ಬಸ್ ನಿಲ್ದಾಣಕ್ಕೆ ಪ್ರತಿದಿನ ಸಾವಿರಾರು ಪ್ರಯಾಣಿಕರು ಆಗಮಿಸುತ್ತಿದ್ದು, ಮಳೆಗಾಲದಲ್ಲಿ ಆವರಣದಲ್ಲಿ ನೀರು ನಿಲ್ಲುವುದರಿಂದ ಪ್ರಯಾಣಿಕರು ಮತ್ತು ವಾಹನ ಚಾಲಕರು ತೊಂದರೆ ಅನುಭವಿಸುತ್ತಿದ್ದರು. ಇದೀಗ ₹೧೦೫ ಲಕ್ಷ ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದ ಅವರು, ಸಾರ್ವಜನಿಕರ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ಶಾಶ್ವತ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಈ ಅಭಿವೃದ್ಧಿ ಕಾರ್ಯದಿಂದ ಪ...