ಬಾಗಲಕೋಟೆ ಉಪಚುನಾವಣೆ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಪ್ರಚಾರ
ಬಾಗಲಕೋಟೆ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರ ಜೀವನದಲ್ಲಿ ನೇರ ಬದಲಾವಣೆ ತಂದಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಾಲೂಕಿನ ಸುತಗುಂಡಾರ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷಗಳು ಮಾಡುತ್ತಿರುವ ಅಪಪ್ರಚಾರಕ್ಕೆ ಜನರು ಕಿವಿಗೊಡಬಾರದು ಎಂದು ಹೇಳಿದರು. ದಿವಂಗತ ಎಚ್.ವೈ. ಮೇಟಿ ಅವರು ಕ್ಷೇತ್ರದಲ್ಲಿ ಸಾಕಷ್ಟು ಜನಪರ ಕಾರ್ಯಗಳನ್ನು ಕೈಗೊಂಡಿದ್ದು, ಅವರ ಸ್ಥಾನಕ್ಕೆ ಉಮೇಶ್ ಮೇಟಿ ಅವರನ್ನು ಅಭ್ಯರ್ಥಿಯಾಗಿ ನಿಲ್ಲಿಸಲಾಗಿದೆ. ಅವರನ್ನು ಎಲ್ಲರೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಸಿಎಂ ಗ್ರಾಮಕ್ಕೆ ಆಗಮಿಸಿದ ವೇಳೆ ಮಹಿಳೆಯರು ಆರತಿ ಬೆಳಗಿ ಸಾಂಪ್ರದಾಯಿಕವಾಗಿ ಸ್ವಾಗತ ಕೋರಿದರು. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ, ಅಭ್ಯರ್ಥಿ ಉಮೇಶ್ ಮೇಟಿ, ಮಹಾದೇವಿ ಮೇಟಿ, ಶ್ರೀಕರ ದೇಸಾಯಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅನೇಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಹಳ್ಳೂರ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ಮೇಟಿ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಅವರ ಪುತ್ರ ಉಮೇಶ್ ಮೇಟಿ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಕೋರಿದರು. ಸಚಿವ ಎಂ.ಬಿ. ಪಾಟೀಲ ಹಾಗೂ ಮಾಜಿ ಸಚಿವ ಅಜಯಕುಮಾರ್...